ರಾಜ್ಯ ಬಜೆಟ್ 2023: ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಘೋಷಣೆ

ಮುಖ್ಯಮಂತ್ರಿ ವಿದ್ಯಾಶಕ್ತಿ ಹೊಸ ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯಡಿ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಘೋಷಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Updated on: 

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿರುವ ಎರಡನೇ ಬಜೆಟ್ ನಲ್ಲಿ ಎಲ್ಲ ಸಮುದಾಯದ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿದ್ದಾರೆ. 

ಮುಖ್ಯಮಂತ್ರಿ ವಿದ್ಯಾಶಕ್ತಿ ಹೊಸ ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯಡಿ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಘೋಷಿಸಿದ್ದಾರೆ. ಇದರಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಯೋಜನೆಯ ಲಾಭ ದೊರೆಯಲಿದೆ.

ಬಜೆಟ್ ನಲ್ಲಿ ಶಿಕ್ಷಣಕ್ಕೆ ಭರ್ಜರಿ ಕೊಡುಗೆ ನೀಡಿರುವ ಮುಖ್ಯಮಂತ್ರಿ,  9,556 ಶಾಲಾ ಕೊಠಡಿಗಳ ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದೆ.  ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಯೋಜನೆ ಘೋಷಿಸಲಾಗಿದೆ. 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಮಕ್ಕಳ ಬಸ್ಸು ಯೋಜನೆಗಾಗಿ ರೂ. 100 ಕೋಟಿ ಅನುದಾನ ಮೀಸಲಿಡಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com