2023-24ನೇ ಸಾಲಿನ ಕರ್ನಾಟಕ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ  ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು. ರಾಜ್ಯ ಬಜೆಟ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಪಡೆದುಕೊಂಡಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಬಜೆಟ್ ಮಂಡಿಸುವ ಮುನ್ನ ಸಾಮಾನ್ಯವಾಗಿ ಎಲ್ಲಾ ಮುಖ್ಯಮಂತ್ರಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಳ್ಳುವುದು ಸಾಮಾನ್ಯ. ಆದರೆ‌ ಸಿಎಂ ಸಿದ್ದರಾಮಯ್ಯ ಅವರು, ಯಾವುದೇ ದೇವಸ್ಥಾನಕ್ಕೆ ಭೇಟಿ ನೀಡದೆ, ತಮ್ಮ ನಿವಾಸದಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com