ರಾಜ್ಯ ಬಜೆಟ್ 2023: ಎಣ್ಣೆ ಪ್ರಿಯರಿಗೆ ಸರ್ಕಾರ 'ಕಿಕ್'; ಅಬಕಾರಿ ತೆರಿಗೆ ಹೆಚ್ಚಳ; ಇನ್ಮುಂದೆ ಮದ್ಯ ದುಬಾರಿ!

ಎಣ್ಣೆ ಪ್ರಿಯರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಇಂದು ಶುಕ್ರವಾರ ಮಂಡಿಸಿರುವ ಬಜೆಟ್ ನಲ್ಲಿ ಶಾಕ್ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಎಣ್ಣೆ ಪ್ರಿಯರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಇಂದು ಶುಕ್ರವಾರ ಮಂಡಿಸಿರುವ ಬಜೆಟ್ ನಲ್ಲಿ ಶಾಕ್ ನೀಡಿದ್ದಾರೆ.

ಬಜೆಟ್‌ ಮಂಡನೆಗೂ ಮುನ್ನ 'ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು' ಎಂದು ಸಿದ್ದರಾಮಯ್ಯ ಅವರು ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್‌ ಮಂಡಿಸುತ್ತಿದ್ದಾರೆ. ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಅದಕ್ಕೆ ತಗುಲುವ ವೆಚ್ಚವನ್ನು ಸರಿದೂಗಿಸಲು ಮದ್ಯಪಾನ ಪ್ರಿಯರ ಮೇಲೆ ಭಾರ ಹೊರಿಸಿದೆ. 

ಅಬಕಾರಿ ತೆರಿಗೆಯಲ್ಲಿ ಹೆಚ್ಚಳ ಮಾಡಲಾಗಿದ್ದು, ಇದರಿಂದ ಮದ್ಯ ದುಬಾರಿಯಾಗಲಿದೆ. ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಅಬಕಾರಿ ತೆರಿಗೆಯನ್ನು ಶೇಕಡಾ 20 ರಷ್ಟು ಹೆಚ್ಚಳ ಮಾಡಲಾಗಿದೆ.

ಗ್ಯಾರಂಟಿ ಭಾರ ಇಳಿಸಲು ತೆರಿಗೆ ಭಾರ: ರಾಜ್ಯದ ಅಬಕಾರಿ ತೆರಿಗೆಯಲ್ಲಿ ಶೇ 20ರಷ್ಟು ಹೆಚ್ಚಳ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ತೆರಿಗೆ ಶೇ 10ರಷ್ಟು ಹೆಚ್ಚಳವಾಗಲಿದೆ. ಇಂದು ವಿಧಾನಸಭೆಯಲ್ಲಿ ನೂತನ ಸರ್ಕಾರದ ಮೊದಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯದ ಮಲಿನ ಹೆಚ್ಚುವರಿ ತೆರಿಗೆಯನ್ನು ಘೋಷಣೆ ಮಾಡಿದ್ದಾರೆ.

ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇಕಡಾ 175ರಿಂದ 185ಕ್ಕೆ ಹೆಚ್ಚಿಸಲಾಗಿದೆ ಎಂದು ಸಹ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ. ಇದರೊಂದಿಗೆ, ಹೆಚ್ಚು ಪರಿಣಾಮಕಾರಿಯಾದ ಜಾರಿ ಮತ್ತು ನಿಯಂತ್ರಣಾ ಕ್ರಮಗಳ ಮೂಲಕ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂಪಾಯಿಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. 

ಹಣಕಾಸು ಖಾತೆ ಹೊಂದಿರುವ ಸಿದ್ದರಾಮಯ್ಯ ಅವರು ಭಾರತೀಯ ನಿರ್ಮಿತ ವಿದೇಶಿ ಮದ್ಯದ (IMFL) ಮೇಲಿನ ಎಲ್ಲಾ 18 ಸ್ಲ್ಯಾಬ್‌ಗಳ ಮೇಲಿನ ಸುಂಕದ ದರವನ್ನು ಶೇಕಡಾ 20 ರಷ್ಟು ಹೆಚ್ಚಿಸಲು ಪ್ರಸ್ತಾಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com