ಸಿದ್ದರಾಮಯ್ಯ ಬಜೆಟ್: ಜಲಸಂಪನ್ಮೂಲ ಇಲಾಖೆಗೆ 1 ಲಕ್ಷ ಕೋಟಿ ರೂ. ಮೀಸಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ ಒಟ್ಟಾರೆ 1 ಲಕ್ಷ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ ಒಟ್ಟಾರೆ 1 ಲಕ್ಷ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.

ರಾಜ್ಯದಲ್ಲಿ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 940 ಕೋಟಿ ಮೀಸಲಿಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ತಮ್ಮ 14ನೇ ಬಜೆಟ್ ನಲ್ಲಿ 770 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದ್ದಾರೆ.

19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲಿಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ಸರ್ಕಾರ ನಿರ್ಧಾರಿಸಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ 5 ಸಾವಿರ ಕೋಟಿ ರೂ., ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗೆ 1 ಸಾವಿರ ಕೋಟಿ ರೂ., ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ರೂ., ಎತ್ತಿನಹೊಳೆ ಯೋಜನೆ 3 ಸಾವಿರ ಕೋಟಿ ರೂ. ಹಾಗೂ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com