ಕರ್ನಾಟಕ ಬಜೆಟ್ 2023: ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬಡ್ಡಿರಹಿತ ಸಾಲದ ಮಿತಿ 3 ಲಕ್ಷ ರೂ.ಗೆ ಹೆಚ್ಚಳ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸುತ್ತಿದ್ದು, ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಮೀನುಗಾರರು
ಮೀನುಗಾರರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸುತ್ತಿದ್ದು, ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ ಎಂದರು.

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದು ಅವರು ಹೇಳಿದರು. 

ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ಅವಕಾಶಗಳನ್ನು ಬಳಸಿಕೊಳ್ಳಲಾಗುವುದು. ಜೊತೆಗೆ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುವುದು ಎಂದರು.

ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮವಹಿಸಲಾಗುವುದು. ಅಲ್ಲದೆ, ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com