ರಾಜ್ಯ ಬಜೆಟ್ 2023: ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ, ಚಿತ್ರರಂಗಕ್ಕೆ ಸಿಎಂ ಕೊಡುಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.
ಚಿತ್ರರಂಗದ ಗಣ್ಯರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಚಿತ್ರ (ಸಂಗ್ರಹ ಚಿತ್ರ)
ಚಿತ್ರರಂಗದ ಗಣ್ಯರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಚಿತ್ರ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.

ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಚಿತ್ರನಗರಿ ಕುರಿತು ಈ ಬಾರಿಯೂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.

2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿ ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ, ಇಲ್ಲಿವರೆಗೂ ಅನುಷ್ಠಾನಗೊಂಡಿಲ್ಲ. ಈ ಬಾರಿ ಮೈಸೂರು ಜಿಲ್ಲೆಯಲ್ಲೇ ಚಿತ್ರನಗರಿ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರವೇ ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಆ ಘೋಷಣೆಯಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲು ಮತ್ತೆ ಮುಂದಾಗಿದೆ. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಈ ಮೂಲಕ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದಾರೆ.

ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಇದನ್ನು ಈಡೇರಿಸುವ ಭರವಸೆ ನೀಡಿದ್ದಾರೆ.

ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಅಸ್ತು ಎಂದಿದೆ.

ಕರ್ನಾಟಕ ಸರಕಾರ ಕನ್ನಡದ ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು ಕಳೆದ ಮೂರು ವರ್ಷಗಳಿಂದ ನೀಡಿರಲಿಲ್ಲ. ನಾನಾ ರೀತಿಯ ಕಾರಣಗಳನ್ನು ಕೊಡುತ್ತಲೇ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದಲ್ಲದೆ, ಈ ಬಾರಿಯ ಬಜೆಟ್ ನಲ್ಲಿ ಪುನೀತ್ ರಾಜ್ ಕುಮಾರ್ ಅವರ ಹೆಸರಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒಂದಷ್ಟು ಅನುದಾನ ನೀಡಿದ್ದಾರೆ.

ಪುನೀತ್ ರಾಜ್ ಕುಮಾರ್‌ ಅವರ  ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಆರೋಗ್ಯವಂಥರು ಎನಿಸಿಕೊಂಡವರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಾಗಾಗಿಯೇ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಯಲು ಆರು ಕೋಟಿ ರೂಪಾಯಿ ಅನುದಾನ ನೀಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com