ಕರ್ನಾಟಕ ಬಜೆಟ್ 2023: ಸಿಎಂ ಸಿದ್ದರಾಮಯ್ಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಯೋಜನೆಗಳೇನು?

ಸಿಎಂ ಸಿದ್ದರಾಮಯ್ಯ (CM Siddaramaiah) ಕರ್ನಾಟಕ ಬಜೆಟ್ 2023-24ನ್ನು ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್​​ನಲ್ಲಿ ಸರ್ಕಾರ ಪ್ರವಾಸೋದ್ಯಮ ಕ್ಷೇತ್ರಕ್ಕೆ(Tourism) ಹಲವು ಯೋಜನೆಗಳನ್ನು ಪ್ರಕಟಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಕರ್ನಾಟಕ ಬಜೆಟ್ 2023-24ನ್ನು ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್​​ನಲ್ಲಿ ಸರ್ಕಾರ ಪ್ರವಾಸೋದ್ಯಮ ಕ್ಷೇತ್ರಕ್ಕೆ(Tourism) ಹಲವು ಯೋಜನೆಗಳನ್ನು ಪ್ರಕಟಿಸಿದೆ. 

ಹಂಪಿ-ಬಾದಾಮಿ-ಐಹೊಳೆ- ಪಟ್ಟದಕಲ್ಲು-ವಿಜಯಪುರ ಪ್ರವಾಸಿ ಸ್ಥಳಗಳನ್ನು ಮತ್ತು ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು-ಹಳೆಬೀಡು ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಕ್ರಮ, ಬೇಲೂರು, ಹಳೆಬೀಡು, ಸೋಮನಾಥಪುರಗಳನ್ನು ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ.

ಜೋಗ ಜಲಪಾತದಲ್ಲಿ 116 ಕೋಟಿ ರೂಪಾಯಿ, ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್​ವೇ ಅಭಿವೃದ್ಧಿಗೆ ಯೋಜನೆ ಜಾರಿ, ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿ.

ಪರ್ವತ ಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಹಾಗೂ ಮುಳ್ಳಯ್ಯನಗಿರಿ ದತ್ತಪೀಠಗಳಲ್ಲಿ ರೋಪ್​ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ. ಕಡಲತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಸಿ.ಆರ್​.ಜಡ್​ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅನುಮೋದನೆ ಪಡೆಯಲು ಚಿಂತನೆ.

ತದಡಿ ಬಂದರಿನಲ್ಲಿ ಸಮಗ್ರ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನು ಅಭಿವೃದ್ಧಿ ಮಾಡಲು ಕ್ರಮ, ಪಾರಂಪರಿಕ ಪ್ರವಾಸಿ ತಾಣಗಳಾದ ಬೀದರ್​ ಹಾಗೂ ಕಲಬುರಗಿ ಕೋಟೆಗಳನ್ನು ಮತ್ತಷ್ಟು ಅಭಿವೃದ್ಧಗೊಳಿಸಲು ಯೋಜನೆ ಜಾರಿ, ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು "Adopt a Monument" ಯೋಜನೆ ಜಾರಿ.ಪ್ರಸಿದ್ಧ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ, ಯಾತ್ರಾರ್ಥಿಗಳಿಗೆ ಯೋಜನೆ.

ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ. ಅದೇ ರೀತಿ ಇದರ ಮೊದಲ ಹಂತದ ಕಾಮಗಾರಿಗೆ 45 ಕೋಟಿ ರೂ. ಅನುದಾನ ಬಿಡುಗಡೆ.ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಕೆ.ಎಸ್​.ಟಿ.ಡಿ.ಸಿ ವತಿಯಿಂದ ಕಾರ್ಯಕ್ರಮವನ್ನು ಸಹ ಕೈಗೊಳ್ಳಲು ನಿರ್ಧಾರ.

ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನ ನೀಡುವುದಾಗಿ ಘೋಷಣೆ, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್​ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್​ ಟ್ರಿಪ್ ಸೇವೆ ಪ್ರಾರಂಭ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ ದೃಷ್ಟಿಯಿಂದ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಹೊರ ರಾಜ್ಯಗಳ ಶಿಲ್ಪಿಗಳ ಮೇಲೆ ಅವಲಂಬಿತರಾಗಿದ್ದು, ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದರು.

ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಜನಪ್ರಿಯ ಪ್ರವಾಸೋದ್ಯಮ ಸ್ಥಳಗಳಲ್ಲಿ ಯಾತ್ರಿ ನಿವಾಸ ಅಥವಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು, ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗೆ ವಿಶೇಷ ಅನುದಾನದಡಿ 75 ಕೋಟಿ ರೂಪಾಯಿ ಮೀಸಲು. 

ಕಡಲತೀರದ ಕರಾವಳಿಯುದ್ದಕ್ಕೂ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಕಾರ್ಡ್‌ಗಳಲ್ಲಿ ಕರಾವಳಿ ಪ್ರವಾಸೋದ್ಯಮ ಕಾರ್ಯಪಡೆಯು ಅಂತರರಾಷ್ಟ್ರೀಯ ಸರ್ಫಿಂಗ್ ತಾಣವಾಗಿ ಅಭಿವೃದ್ಧಿಗೊಳ್ಳಲಿದೆ.

ಕರ್ನಾಟಕ ತನ್ನ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸಲು ಮಾಸ್ಟರ್ ಪ್ಲಾನ್ ನ್ನು ಸಿದ್ಧಪಡಿಸುತ್ತದೆ. ರಾತ್ರಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸಲು ಗೋಲ್ ಗುಂಬಜ್, ಹಂಪಿ, ಬಾದಾಮಿ ಗುಹೆಗಳು ಮತ್ತು ಬೀದರ್ ಕೋಟೆ ಸೇರಿದಂತೆ ಹಲವಾರು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com