ಕರ್ನಾಟಕ ಬಜೆಟ್ 2023: ರಾಜಧಾನಿ ಬೆಂಗಳೂರಿಗೆ ಘೋಷಿಸಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಿದ್ದು ಅದರಲ್ಲಿ ನಮ್ಮ ಮೆಟ್ರೊ ಮತ್ತು ಉಪನಗರ ರೈಲ್ವೆ ಯೋಜನೆ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಕನಿಷ್ಠ ಐದು ವರ್ಷಗಳು ಬೇಕಾಗುತ್ತದೆ ಎಂಬುದನ್ನು ಗುರುತಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಿದ್ದು ಅದರಲ್ಲಿ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಸಾಂದ್ರತೆಯ ಕಾರಿಡಾರ್‌ಗಳು, ವೈಟ್ ಟಾಪಿಂಗ್, ಘನತ್ಯಾಜ್ಯ ನಿರ್ವಹಣೆ, ರಾಜಕಾಲುವೆಗಳ ಅತಿಕ್ರಮಣ ತಡೆಯುವಿಕೆ ಮತ್ತು ದುರಸ್ತಿ, ರಸ್ತೆಗಳ ಹೊಂಡ-ಗುಂಡಿ ತುಂಬುವುದು, ನಮ್ಮ ಮೆಟ್ರೊ ಮತ್ತು ಉಪನಗರ ರೈಲ್ವೆ ಯೋಜನೆ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಕನಿಷ್ಠ ಐದು ವರ್ಷಗಳು ಬೇಕಾಗುತ್ತದೆ ಎಂಬುದನ್ನು ಗುರುತಿಸಿದ್ದಾರೆ. 

- ಮುಂದಿನ ಮೂರು ವರ್ಷಗಳಲ್ಲಿ ನಮ್ಮ ಮೆಟ್ರೋವನ್ನು 70ಕಿಮೀಗಳಿಂದ 176 ಕಿಮೀಗಳಿಗೆ ಹೆಚ್ಚಿಸಲಾಗುವುದು. 2024 ರ ಅಂತ್ಯದ ವೇಳೆಗೆ, 27 ಕಿಮೀ ಹೆಚ್ಚುವರಿ ಮಾರ್ಗಗಳನ್ನು ಸೇರಿಸಲಾಗುವುದು. ಈ ವರ್ಷ ಬೈಯ್ಯಪ್ಪನಹಳ್ಳಿಯಿಂದ ಕೃಷ್ಣರಾಜಪುರ, ಕೆಂಗೇರಿಯಿಂದ ಚಲ್ಲಘಟ್ಟ, ನಾಗಸಂದ್ರದಿಂದ ಮಾದವಾರವರೆಗೆ, ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಮೆಟ್ರೊ ಸಂಚಾರವನ್ನು ವಿಸ್ತರಿಸಲಾಗುವುದು ಎಂದು ಹೇಳಿದರು. 

- ಒಟ್ಟು 45 ಕಿ.ಮೀ ಒಳಗೊಂಡಿರುವ ಮೆಟ್ರೋ ಹಂತ 3ಕ್ಕೆ ಡಿಪಿಆರ್ ಸಲ್ಲಿಸಲಾಗಿದೆ. ಹೆಬ್ಬಾಳದಿಂದ ಸರ್ಜಾಪುರವರೆಗೆ 37 ಕಿ.ಮೀ.ಗೆ ಹೊಸ ಮಾರ್ಗ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

- ಸಂಚಾರ ದಟ್ಟಣೆ ತಗ್ಗಿಸಲು ಬೆಂಗಳೂರು ಉಪನಗರ ರೈಲು ಯೋಜನೆಗೆ 1,000 ಕೋಟಿ ರೂಪಾಯಿ ನಿಗದಿ 

- ಬಿಬಿಎಂಪಿ ಸೇರಿದಂತೆ 314 ನಗರ ಸ್ಥಳೀಯ ಸಂಸ್ಥೆಗಳಿಗೆ ಸ್ವಚ್ಛ ಭಾರತ 2.0 ಕ್ರಿಯಾ ಯೋಜನೆಗೆ 4,500 ಕೋಟಿ ರೂಪಾಯಿಗಳ ಅನುಮೋದನೆ ನೀಡಲಾಗಿದೆ. ಈ ಯೋಜನೆಯಡಿ ಸುಸ್ಥಿರ ಘನತ್ಯಾಜ್ಯ ನಿರ್ವಹಣೆ ಮತ್ತು ಬಳಸಿದ ನೀರು ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯನವರು ಬಜೆಟ್ ಮಂಡನೆ ವೇಳೆ ಪ್ರಕಟಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com