ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆ: ಸಿಎಂ

ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ 2023-24 ನೇ ಸಾಲಿನ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. 
ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ
ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ 2023-24 ನೇ ಸಾಲಿನ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. 

ಈ ಕರಸಮಾಧಾನ ಯೋಜನೆಯ ಮೂಲಕ ತೆರಿಗೆ ಬಾಕಿಗಳನ್ನು ಯಾವುದೇ ದಾವೆಯಿಲ್ಲದೇ ಕ್ಷಿಪ್ರವಾಗಿ ಸಂಗ್ರಹಿಸಲು ಸಾಧ್ಯವಾಗುತ್ತದೆ ಹಾಗೂ ಈ ಯೋಜನೆಯಡಿ ಎಲ್ಲಾ ಜಿಎಸ್ ಟಿ-ಪೂರ್ವ ಅಧಿನಿಯಮಗಳ ಅಡಿಯಲ್ಲಿ ಬಾಕಿ ಇರುವ ಪೂರ್ಣ ತೆರಿಗೆಯನ್ನು 2023 ರ ಅ.30 ರ ಒಳಗೆ ಪಾವತಿಸುವವರಿಗೆ ಬಡ್ಡಿ ಮತ್ತು ದಂಡಬಡ್ಡಿ ಪಾವತಿಯಲ್ಲಿ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. 

2023-24 ನೇ ಸಾಲಿಗೆ ವಾಣಿಜ್ಯ ತೆರಿಗೆಗಳ ಇಲಾಖೆಗೆ 92,000 ಕೋಟಿ ರೂಪಾಯಿಗಳ ಜಿಎಸ್ ಟಿ ಪರಿಹಾರ ಹೊರತುಪಡಿಸಿ ತೆರಿಗೆ ಸಂಗ್ರಹ ಗುರಿಯನ್ನು ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com