
ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಯಿ ಫೆ.17 ರಂದು ಬಿಜೆಪಿ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಮಂಡಿಸಿದ್ದು, ಮೀನುಗಾರಿಗೆ ಉತ್ತೇಜನಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ಮತ್ಯಸಿರಿ ಯೋಜನೆಯನ್ನು ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.
ಮೀನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರವಾರದಲ್ಲಿ ಸೀ ಫುಡ್ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಇನ್ನು ಮೀನುಗಾರರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸೀಮೆ ಎಣ್ಣೆ ಆಧರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಮಾರ್ಪಡಿಸಲು 40 ಕೋಟಿ ರೂಪಾಯಿ ಅನುದಾನ ನೀಡುತ್ತಿರುವುದಾಗಿ ಸಿಎಂ ಹೇಳಿದ್ದಾರೆ.