ದೂರಗಾಮಿ, ರೈತರ ಆದಾಯ ದ್ವಿಗುಣಗೊಳಿಸುವ ಬಜೆಟ್: ಸಿಎಂ ಬೊಮ್ಮಾಯಿ ಆಯವ್ಯಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಮೆಚ್ಚುಗೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ.17 ರಂದು 2023-24  ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಪ್ರಸಕ್ತ ಸಾಲಿನ ಬಜೆಟ್ ದೂರಗಾಮಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. 
ಬಿ.ಎಸ್ ಯಡಿಯೂರಪ್ಪ
ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ.17 ರಂದು 2023-24  ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಪ್ರಸಕ್ತ ಸಾಲಿನ ಬಜೆಟ್ ದೂರಗಾಮಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. 

ಬಜೆಟ್ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ದೂರಗಾಮಿ ರೈತರ ಆದಾಯ ದ್ವಿಗುಣಗೊಳಿಸುವ ಅದ್ಭುತ ಬಜೆಟ್ ಮಂಡನೆ ಮಾಡಿದ್ದಾರೆ ಅತ್ಯುತ್ತಮ ಬಜೆಟ್ ಎಂದು ಮಾಜಿ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ರಾಜ್ಯದ ಬಡವರು, ದುರ್ಬಲ ವರ್ಗದವರ, ಮಹಿಳೆಯರ, ಶೋಷಿತರ ಹಾಗೂ ಯುವಜನರ ಶ್ರೇಯೋಭಿವೃದ್ಧಿಗೆ ಬಜೆಟ್ ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಮೂಲಸೌಕರ್ಯಗಳಿಗೆ ಒತ್ತು ನೀಡುವುದನ್ನು ಈ ಆಯ-ವ್ಯಯದಲ್ಲಿ ಮುಂದುವರೆಸಲಾಗಿದ್ದು, ಇದರಿಂದ ರಾಜ್ಯವು ದೇಶದಲ್ಲಿ ಹೂಡಿಕೆದಾರರ ನೆಚ್ಚಿನ ಪ್ರದೇಶವಾಗಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ. 

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಬಜೆಟ್

ಬಜೆಟ್ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸಹ ಪ್ರತಿಕ್ರಿಯೆ ನೀಡಿದ್ದು, ಇದು ಸಿಎಂ ಬೊಮ್ಮಾಯಿ ಈ ಬಜೆಟ್ ನಲ್ಲಿ ಸರ್ವರಿಗೂ ಯೋಜನೆ ನೀಡಿದ್ದಾರೆ.  ಭೂರಹಿತ ಮಹಿಳೆಯರಿಗೆ ಮಾಸಿಕ 500 ರೂ ಯೋಜನೆ ಜಾರಿ ಮಾಡಿದ್ದು ಐತಿಹಾಸಿಕ ನಿರ್ಧಾರವಾಗಿದೆ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com