Karnataka Budget 2023: 6 ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ಪಂಗಡದ ಮಕ್ಕಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಸ್ಥಾಪನೆ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂ, ಐಐಎಸ್‌ಸಿ, ಎನ್ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿರುವ 2 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು 4 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, 2ನೇ ಬಾರಿಗೆ ಮುಖ್ಯಮಂತ್ರಿ ಬಜೆಟ್ ಮಂಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಹಲವಾರು ಕೊಡುಗೆಗಳನ್ನು ಘೋಷಿಸಿದ್ದಾರೆ.

ವಿದ್ಯಾರ್ಥಿನಿಲಯಗಳು ಇಲ್ಲದೇ ಇರುವ ಜಿಲ್ಲಾ ಕೇಂದ್ರಗಳಲ್ಲಿ ಪರಿಶಿಷ್ಟ ಪಂಗಡದ ಮಕ್ಕಳಿಗೆ 14 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು 6 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂ, ಐಐಎಸ್‌ಸಿ, ಎನ್ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿರುವ 2 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು 4 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದರು.

ಐಎಸ್ಇಸಿ ಸಂಸ್ಥೆಯಲ್ಲಿ ಪಿಎಚ್.ಡಿ ಮಾಡುವ 5 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ವಿದ್ಯಾರ್ಥಿಗಳಿಗೆ ಡಾ. ಬಿಆರ್ ಅಂಬೇಡ್ಕರ್ ಫೆಲೋಶಿಪ್ ನೀಡಲು 2 ಕೋಟಿ ರೂ. 'ಅನಿಯಂತ್ರಿತ ಶಾಶ್ವತ ನಿಧಿ' (Corpus Fund) ಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಪಡೆಯುವ ಗರಿಷ್ಠ 10 ಲಕ್ಷ ರೂ. ವರೆಗಿನ ಸಾಲವನ್ನು ಶೇ 4ರಷ್ಟು ಬಡ್ಡಿದರಲ್ಲಿ ದೊರಕಿಸಲು ಸರ್ಕಾರದಿಂದ ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ 10 ಸಾವಿರ ಮಂದಿಗೆ ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ನೇಮಕಾತಿ ಹೊಂದಲು ಉಚಿತ ತರಬೇತಿ ನೀಡಲಾಗುವುದು ಎಂದು ಹೇಳಿದರು.

ವಸತಿ ಶಾಲೆಗಳಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಒಟ್ಟು 10 ಕ್ರೈಸ್ ವಸತಿ ಶಾಲೆಗಳಲ್ಲಿ, ಶಾಲೆಗೆ ಒಂದರಂತೆ ಉತ್ಕೃಷ್ಟ ಮಟ್ಟದ ಕ್ರೀಡಾ ಸೌಲಭ್ಯವನ್ನು 10 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು ಎಂದು ತಿಳಿಸಿದರು.

ಬಜೆಟ್ ಮುಖ್ಯಾಂಶಗಳು

*ಸಫಾಯಿ ಕರ್ಮಚಾರಿಗಳಿಗೆ ರಾಜೀವ್‌ಗಾಂದಿ ವಸತಿ ನಿಗಮದ ವತಿಯಿಂದ ವಸತಿ ಸೌಲಭ್ಯ ನೀಡಲು ಕ್ರಮ

*ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಸೇರಿದ ವಿವಿಧ 6 ನಿಗಮಗಳಿಗೆ ನೀಡುವ ಅನುದಾನ ಹೆಚ್ಚಿಸಿ, 795 ಕೋಟಿ ರೂ. ಒದಗಿಸಲಾಗುವುದು.

*20 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು 'Build too Suit' ಮಾದರಿಯಲ್ಲಿ ನಿರ್ಮಾಣ

* ಹಿಂದುಳಿದ ವರ್ಗಗಳಿಗೆ ಸೇರಿದ 11 ಅಭಿವೃದ್ಧಿ ನಿಗಮಗಳಿಗೆ ನೀಡುತ್ತಿರುವ ಅನುದಾನ ಹೆಚ್ಚಿಸಿ 596 ಕೋಟಿ ರೂ. ಒದಗಿಸಲಾಗುವುದು

* ಗಂಗಾ ಕಲ್ಯಾಣ ಯೋಜನೆಯಡಿ 490 ಕೋಟಿ ರೂ. ವೆಚ್ಚದಲ್ಲಿ 19,731 ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಗುರಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com