ಮತದಾರರ ಸೆಳೆಯುವತ್ತ ಸಿಎಂ ಬೊಮ್ಮಾಯಿ ಚಿತ್ತ: ರೇಷ್ಮೆ ಕೃಷಿಗೆ ಭರಪೂರ ಅನುದಾನ

2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೈತಾಪಿ ವರ್ಗಕ್ಕೆ ಬರಪೂರ ಕೊಡುಗೆ ಘೋಷಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೈತಾಪಿ ವರ್ಗಕ್ಕೆ ಬರಪೂರ ಕೊಡುಗೆ ಘೋಷಿಸಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಏಷ್ಯಾದಲ್ಲಿಯೇ 2ನೇ ಅತಿದೊಡ್ಡ ರೇಷ್ಮೆ ಮಾರುಕಟ್ಟೆ ಹೊಂದಿರುವ ಶಿಡ್ಲಘಟ್ಟದಲ್ಲಿ ನಬಾರ್ಡ್ ಯೋಜನೆಯಡಿ, 75 ಕೋಟಿ ರು ಗಳ ವೆಚ್ಚದಲ್ಲಿ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಿಸಲಾಗುವುದು.

ರೇಷ್ಮೆ ಬೆಳೆಗಾರರು ಆಧುನಿಕ ವಿಧಾನಗಳನ್ನು ಬಳಸಿಕೊಂಡು ಗುಣಮಟ್ಟದ ಕಚ್ಚಾ ರೇಷ್ಮೆ ಉತ್ಪಾದಿಸಲು ಅನುವಾಗುವಂತೆ 32 ಸ್ವಯಂ ಚಾಲಿತ ರೀಲಿಂಗ್ ಘಟಕಗಳ ಸ್ಥಾಪನೆಗೆ 10 ಕೋಟಿ ರು ಹಾಗೂ 1000 ರೇಷ್ಮೆ ಬೆಳೆಗಾರರಿಗೆ ಶ್ರೆಡ್ಡರ್ಸ್ ಗಳನ್ನು ಒದಗಿಸಲು 12 ಕೋಟಿ ರು. ನೆರವು ನೀಡಲಾಗುವುದು.

ಮೂಲ ಬಿತ್ತನೆ ಗೂಡುಗಳ ನಿರಂತರ ಉತ್ಪಾದನೆ ಮತ್ತು ಸರಬರಾಜಿಗಾಗಿ, ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಬಲ ಪಡಿಸಲು  8 ಕೋಟಿ ರು. ಅನುದಾನ ಒದಗಿಸಲಾಗುವುದು.

ರೇಷ್ಮೆ ಗೂಡುಗಳನ್ನು ದೀರ್ಘಾವಧಿಗೆ ಸಂರಕ್ಷಿಸಲು ಹಾಗೂ ಆ ಮೂಲಕ ರೈತರ ರೇಷ್ಮೆಗೆ ಉತ್ತಮ ಬೆಲೆ ದೊರೆಯುವಂತೆ ಅನುಕೂಲ ಕಲ್ಪಿಸಲು ರಾಜ್ಯದ ಪ್ರಮುಖ 10 ರೇಷ್ಮೆ ಬೆಳೆಯುವ ಪ್ರದೇಶಗಳಲ್ಲಿ Hot Air convyer dryer ಅಳವಡಿಸಲು 5 ಕೋಟಿ ರು.ಗಳ ನುದಾನ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com