ರಾಜ್ಯ ಬಜೆಟ್: ಬಿಪಿಎಲ್​ ಕಾರ್ಡ್​ ಪರಿಶಿಷ್ಠ ಜಾತಿ- ಪರಿಶಿಷ್ಠ ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್​ ಉಚಿತ ವಿದ್ಯುತ್​

ಅಮರ್ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಬಿಪಿಎಲ್​ ಕಾರ್ಡ್​ ಹೊಂದಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕುಟುಂಬಗಳಿಗೆ ಮಾಸಿಕ 75 ಯೂನಿಟ್​ ಉಚಿತ ವಿದ್ಯುತ್​ ಯೋಜನೆಯನ್ನು ಸಿಎಂ ಘೋಷಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಮರ್ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಬಿಪಿಎಲ್​ ಕಾರ್ಡ್​ ಹೊಂದಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕುಟುಂಬಗಳಿಗೆ ಮಾಸಿಕ 75 ಯೂನಿಟ್​ ಉಚಿತ ವಿದ್ಯುತ್​ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ಹಿಂದುಳಿದ ವರ್ಗಗಳ 11 ಅಭಿವೃದ್ಧಿ ನಿಗಮಗಳಿಗೆ 569 ಕೋಟಿ ರೂ. ಅನುದಾನವನ್ನು ಮೀಸಲಿಡುವುದಾಗಿ ಘೋಷಣೆ ಮಾಡಿದರು. 

ಗೃಹಬಳಕೆಗೆ ವಿದ್ಯುತ್ ಬಳಸುತ್ತಿರುವ ಕುಟುಂಬದವರು ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. 69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ರೂ. ಸಾಲ ಮಂಜೂರು, ಎಸ್​ಸಿ-ಎಸ್​ಟಿ ನಿಗಮಗಳಿಗೆ 795 ಕೋಟಿ ರೂ. ಮೀಸಲಿಡುವುದಾಗಿ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com