ರಾಮನಗರಕ್ಕೆ ಬಂಪರ್- ವಿರೋಧ ಪಕ್ಷಗಳಿಗೆ ಟಕ್ಕರ್: ರಾಮಮಂದಿರ ನಿರ್ಮಾಣ ಘೋಷಿಸಿದ ಚೀಫ್ ಮಿನಿಸ್ಟರ್!
2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ.
Published: 17th February 2023 01:08 PM | Last Updated: 17th February 2023 01:09 PM | A+A A-

ಬಸವರಾಜ ಬೊಮ್ಮಾಯಿ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಛಲತೊಟ್ಟಂತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಾವು ಮಂಡಿಸುತ್ತಿರುವ ಎರಡನೇ ಬಜೆಟ್‌ನಲ್ಲಿ ಎಲ್ಲ ಸಮುದಾಯದ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿದ್ದಾರೆ.
2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ.
ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ರಾಮನಗರಕ್ಕೆ ವಿಶೇಷ ಗಮನ ಹರಿಸಲಾಗಿದೆ. ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ. ಮಂಚನಬೆಲೆ ಡ್ಯಾಂ ಹಿನ್ನೀರಿನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಜಂಗಲ್ ಲಾಡ್ಜ್ ರೆಸಾರ್ಟ್ ಸ್ಥಾಪನೆಗೂ ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಳಿರುವ ತಾಣಗಳ ಪ್ರವಾಸಿ ಸರ್ಕಿಟ್ ಅನ್ನು ಈ ವರ್ಷವೇ ಆರಂಭಿಸಲಾಗುತ್ತದೆ.