ರಾಜ್ಯ ಬಜೆಟ್ 2023: ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಘೋಷಣೆ
ಮುಖ್ಯಮಂತ್ರಿ ವಿದ್ಯಾಶಕ್ತಿ ಹೊಸ ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯಡಿ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಘೋಷಿಸಿದ್ದಾರೆ.
Published: 17th February 2023 11:28 AM | Last Updated: 17th February 2023 02:00 PM | A+A A-

ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿರುವ ಎರಡನೇ ಬಜೆಟ್ ನಲ್ಲಿ ಎಲ್ಲ ಸಮುದಾಯದ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿದ್ದಾರೆ.
ಮುಖ್ಯಮಂತ್ರಿ ವಿದ್ಯಾಶಕ್ತಿ ಹೊಸ ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯಡಿ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಘೋಷಿಸಿದ್ದಾರೆ. ಇದರಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಯೋಜನೆಯ ಲಾಭ ದೊರೆಯಲಿದೆ.
ಬಜೆಟ್ ನಲ್ಲಿ ಶಿಕ್ಷಣಕ್ಕೆ ಭರ್ಜರಿ ಕೊಡುಗೆ ನೀಡಿರುವ ಮುಖ್ಯಮಂತ್ರಿ, 9,556 ಶಾಲಾ ಕೊಠಡಿಗಳ ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದೆ. ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಯೋಜನೆ ಘೋಷಿಸಲಾಗಿದೆ. 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಮಕ್ಕಳ ಬಸ್ಸು ಯೋಜನೆಗಾಗಿ ರೂ. 100 ಕೋಟಿ ಅನುದಾನ ಮೀಸಲಿಡಲಾಗಿದೆ.