ಶರಣು-ಶರಣಾರ್ತಿ: ಮಠ-ಮಂದಿರಗಳಿಗೆ ಸಿಎಂ ಭರ್ಜರಿ ಕೊಡುಗೆ; 1000 ಕೋಟಿ ರೂ. ಅನುದಾನ!

2023-24ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಲವಾರು ಘೋಷಣೆಗಳನ್ನು ಮಾಡಿದ್ದು, ಮಠ-ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ರೂ ಅನುದಾನವನ್ನು ಮೀಸಲಿಟ್ಟಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಲವಾರು ಘೋಷಣೆಗಳನ್ನು ಮಾಡಿದ್ದು, ಮಠ-ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ರೂ ಅನುದಾನವನ್ನು ಮೀಸಲಿಟ್ಟಿದ್ದಾರೆ.

ನಂದಿ ಗಿರಿಧಾಮ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ನಂದಿಬೆಟ್ಟಕ್ಕೆ ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ರೋಪ್‌ ವೇ ನಿರ್ಮಾಣ, ಪ್ರವಾಸಿ ಗೈಡ್‌ಗಳ ಮಾಸಿಕ ಪ್ರೋತ್ಸಾಹ ಧನ 2 ರಿಂದ 5 ಸಾವಿರಕ್ಕೆ ಏರಿಕೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ರೂ. ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 475 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಕಿತ್ತೂರು ಭಾಗದ ಅಭಿವೃದ್ಧಿಗೆ ಕಿತ್ತೂರು ಕರ್ನಾಟಕ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದೂ ಘೋಷಿಸಿದ್ದಾರೆ.

'ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ' ಎಂಬ ಕಾರ್ಯಕ್ರಮದಡಿ ಪ್ರತಿ ಜಿಲ್ಲೆಯಲ್ಲಿ ಎಲ್ಲ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಬಗ್ಗೆ ಬಜೆಟ್​ನಲ್ಲಿ ಘೋಷಿಸಿದ್ದಾರೆ.

ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ರವನ್ನು ನೀಡಲಾಗುವುದು. ಹಾಗೆಯೇ ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಒದಗಿಸಲಾಗಿಸಲಾಗಿದೆ. ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಮ್ಯೂಸಿಯಂ, ಕಲಾ ಗ್ಯಾಲರಿ ನಿರ್ಮಾಣಮಾಡಲಾಗುವುದು. ಹೊನ್ನಾವರದಲ್ಲಿ ಚೆನ್ನಭೈರಾದೇವಿ ಸ್ಮಾರಕ ಪಾರ್ಕ್‌ ನಿರ್ಮಾಣ ಮಾಡಲಾಗುವುದು.

'ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com