social_icon

ರಾಜ್ಯ ಬಜೆಟ್ 2023: ಹಠಾತ್ ಹೃದಯ ಸಂಬಂಧಿ ಸಾವು ತಡೆಗೆ ಪುನೀತ್‌ ರಾಜ್‌ಕುಮಾರ್‌ ಸ್ಮರಣಾರ್ಥ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ AED ಅಳವಡಿಕೆ

ಡಾ|| ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು  ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು.

Published: 07th July 2023 02:12 PM  |   Last Updated: 07th July 2023 03:42 PM   |  A+A-


Puneeth rajkumar

ಪುನೀತ್ ರಾಜಕುಮಾರ್

Posted By : Srinivas Rao BV
Source : Online Desk

ಬೆಂಗಳೂರು: ಕರ್ನಾಟಕ ರತ್ನ ಡಾ|| ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು  ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ 6 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.  

ಜು.07 ರಂದು ತಮ್ಮ 14 ನೇ ಬಜೆಟ್ ಮಂಡನೆ ಮಾಡಿರುವ ಸಿಎಂ, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಗೆ ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಬಡವರಿಗೆ ಉಚಿತ ಡಯಾಲಿಸಿಸ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಏಕಬಳಕೆಯ ಡಯಾಲೈಸರ್‌ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್‌ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಘೋಷಣೆಗಳು 

  • ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 PHC ಗಳನ್ನು CHC ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ CHC ಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳ ಅನುದಾನ
  • ರಾಜ್ಯದಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರು ಮತ್ತು ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ಸಮಗ್ರವಾದ ಪರೀಕ್ಷೆ, ಚಿಕಿತ್ಸೆ, ಅರಿವು ಮೂಡಿಸುವಿಕೆ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗೆ ಕಾರ್ಯಕ್ರಮವನ್ನು ಜಾರಿಗೆ 25 ಕೋಟಿ ರೂ. ಅನುದಾನ 
  • ರಾಜ್ಯ ಕಳೆದ ವರ್ಷ ನಿಮ್ಹಾನ್ಸ್‌ ಸಹಯೋಗದೊಂದಿಗೆ ಮೆದುಳಿನ ಆರೋಗ್ಯ ಆರೈಕೆ ಸೇವೆಗಳನ್ನು ಉತ್ತೇಜಿಸಲು 3 ಜಿಲ್ಲೆಗಳಲ್ಲಿ ʻಬ್ರೈನ್‌ ಹೆಲ್ತ್‌ ಇನಿಶಿಯೇಟಿವ್‌ʼ (Brain Health Initiative) ಎಂಬ ವಿಶಿಷ್ಟ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಯಶಸ್ವಿ ಪ್ರಾಯೋಗಿಕ ಅನುಷ್ಠಾನದ ನಂತರ ಈ ಯೋಜನೆಯನ್ನು ಇಡೀ ರಾಜ್ಯಕ್ಕೆ ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
  • ʻಆಶಾಕಿರಣʼ ಎಂಬ ಕಾರ್ಯಕ್ರಮದಡಿಯಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.  
  • ಸಮಾಜದ ದುರ್ಬಲ ವರ್ಗಗಳಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಮುದಾಯ ಆಧಾರಿತ ತಪಾಸಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ, ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ-ಕ್ಷ-ಕಿರಣ (Hand Held X-ray) ಉಪಕರಣವನ್ನು ಒದಗಿಸಲಾಗುವುದು. ಪ್ರತಿ X-ray ಯಂತ್ರಕ್ಕೆ 20 ಲಕ್ಷ ರೂ. ದಂತೆ ಒಟ್ಟು ಮೂರು ಕೋಟಿ ರೂ. ಒದಗಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
  • ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಅಗತ್ಯ ಔಷಧಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ವಿಭಾಗಗಳ ಎಂಟು ಜಿಲ್ಲೆಗಳಲ್ಲಿ ಸಮಗ್ರ ತಪಾಸಣೆ ಕಾರ್ಯಕ್ರಮವನ್ನು ಜಾರಿ. 
  • ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್‌ ಮತ್ತು ಆರು ಎಂ.ಆರ್‌.ಐ ಸ್ಕ್ಯಾನಿಂಗ್‌ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಣೆ.
  • 8 ಕೋಟಿ ರೂ.ಗಳ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು. 
  • ರಾಜ್ಯದಲ್ಲಿ ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ ಯೋಜನೆ ಹಾಗೂ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ ಸೇರಿದಂತೆ ಇಲಾಖೆಯ ಇನ್ನಿತರ ಎಲ್ಲಾ ಅಂತರ್ಜಾಲ ಉಪಕ್ರಮಗಳನ್ನು ಅನುಷ್ಠಾನ ಮಾಡಲು ಕರ್ನಾಟಕ ಡಿಜಿಟಲ್‌ ಹೆಲ್ತ್‌ ಸೊಸೈಟಿಯನ್ನು (Karnataka Digital Health Society) ಸ್ಥಾಪನೆ

Stay up to date on all the latest ರಾಜ್ಯ ಬಜೆಟ್ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp