ಗ್ಯಾರಂಟಿ ಬಜೆಟ್: ವಾಣಿಜ್ಯ ವಾಹನಗಳಿಗೆ ಮಾತ್ರ ಮೋಟಾರು ತೆರಿಗೆ ಹೆಚ್ಚಳ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ ನಲ್ಲಿ ವಾಹನ ತೆರಿಗೆ ಹೆಚ್ಚಳ ಪ್ರಸ್ತಾಪ ಮಾಡಿದ್ದು, ಇದು ಕೇವಲ ವಾಣಿಜ್ಯ ಬಳಕೆ ವಾಹನಗಳಿಗೆ ಮಾತ್ರ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು...
Published: 08th July 2023 11:06 AM | Last Updated: 08th July 2023 03:35 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ ನಲ್ಲಿ ವಾಹನ ತೆರಿಗೆ ಹೆಚ್ಚಳ ಪ್ರಸ್ತಾಪ ಮಾಡಿದ್ದು, ಇದು ಕೇವಲ ವಾಣಿಜ್ಯ ಬಳಕೆ ವಾಹನಗಳಿಗೆ ಮಾತ್ರ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಮೋಟಾರು ವಾಹನ ತೆರಿಗೆಯನ್ನು ತಿದ್ದುಪಡಿ ಮೂಲಕ ಸರಳೀಕರಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದ್ದು, ಕೆಲವು ವರ್ಗಗಳ ವಾಹನಗಳ ಮೇಲೆ ವಿಧಿಸುವ ಪ್ರಸ್ತುತ ತೆರಿಗೆಯನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ. ಈ ತೆರಿಗೆ ಹೆಚ್ಚಳವು ವಾಣಿಜ್ಯ ಸರಕುಗಳ ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ವೈಯಕ್ತಿಕ ವಾಹನಗಳಿಗೆ ಅಲ್ಲ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
"ವಾಹನ ತೆರಿಗೆ ಹೆಚ್ಚಳವು ತಕ್ಷಣವೇ ಜಾರಿಗೆ ಬರುವುದಿಲ್ಲ. ಕರ್ನಾಟಕ ಮೋಟಾರು ವಾಹನ ತೆರಿಗೆ ಮಸೂದೆಯನ್ನು ಮೊದಲು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಬೇಕು" ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ: ರಾಜ್ಯ ಬಜೆಟ್ 2023: ತೆರಿಗೆ ಹೆಚ್ಚಿಸುವ ಮೂಲಕ ಬೊಕ್ಕಸಕ್ಕೆ 1,62,500 ಕೋಟಿ ರೂಪಾಯಿ ಸಂಗ್ರಹಣೆಯ ಗುರಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ನಲ್ಲಿ ಸಾರಿಗೆ ಇಲಾಖೆಗೆ 2023-24ನೇ ಸಾಲಿಗೆ 10,500 ಕೋಟಿ ರೂ.ಗಳ ಆದಾಯ ಸಂಗ್ರಹದ ಗುರಿ ಹೊಂದಿದ್ದರೆ, ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ಆದಾಯ ಸಂಗ್ರಹದ ಗುರಿ 11,500 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಶಕ್ತಿ ಯೋಜನೆಯು ಉದ್ಯೋಗಸ್ಥ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಕನಸುಗಳು ಮತ್ತು ಆಕಾಂಕ್ಷೆಗಳಿಗೆ ರೆಕ್ಕೆಗಳನ್ನು ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದರು. "ಈ ಯೋಜನೆ ಅನುಷ್ಠಾನದಿಂದ, 13 ಕೋಟಿಗೂ ಹೆಚ್ಚು ಟಿಕೆಟ್‌ಗಳನ್ನು ನೀಡಲಾಗಿದೆ ಮತ್ತು ಸರಿಸುಮಾರು 50-60 ಲಕ್ಷ ಮಹಿಳೆಯರು ಪ್ರತಿದಿನ ಈ ಸೌಲಭ್ಯವನ್ನು ಬಳಸುತ್ತಾರೆ. ಶಕ್ತಿ ಯೋಜನೆಗೆ ವಾರ್ಷಿಕ 4,000 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.