ಸಾಂದರ್ಭಿಕ ಚಿತ್ರ
ಕೇಂದ್ರ ಬಜೆಟ್
30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳ ಸ್ಥಾಪನೆ- ನಿರ್ಮಲಾ ಸೀತಾರಾಮನ್
ದೇಶದ ಯುವ ಜನರಿಗೆ ಅಂತಾರಾಷ್ಟ್ರೀಯ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ 30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳನ್ನು ವಿವಿಧ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನವದೆಹಲಿ: ದೇಶದ ಯುವ ಜನರಿಗೆ ಅಂತಾರಾಷ್ಟ್ರೀಯ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ 30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳನ್ನು ವಿವಿಧ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಲೋಕಸಭೆಯಲ್ಲಿಂದು 2023ನೇ ಸಾಲಿನ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕೌಶಲ್ ವಿಕಾಸ ಯೋಜನೆ 4.0 ಜಾರಿಗೊಳಿಸಲಾಗುವುದು ಎಂದರು.
ಈ ಯೋಜನೆಯಡಿ ಕೋಡಿಂಗ್, ಎಐ, ರೊಬೊಟಿಕ್ಸ್, 3 ಡಿ ಪ್ರಿಟಿಂಗ್ ಡ್ರೋನ್ ನಂತಹ ತರಬೇತಿ ನೀಡುವ ಮೂಲಕ ದೇಶದ ಯುವ ಜನತೆಗೆ ಉದ್ಯೋಗಾವಕಾಶಗೆ ಅವಕಾಶ ಮಾಡಿಕೊಡಲಾಗುವುದು, ಅಂತಾರಾಷ್ಟ್ರೀಯ ಮಟ್ಟದ ಕೌಶಲ್ಯ ತರಬೇತಿಗಾಗಿ ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ