ಕೇಂದ್ರ ಬಜೆಟ್ 2023:  ಶಿಕ್ಷಣ ಕ್ಷೇತ್ರಕ್ಕೂ ಮಹತ್ವದ ಕೊಡುಗೆ; 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ ಬಜೆಟ್‍ನಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಗಳ ಸ್ಥಾಪನೆ ಮಾಡುವುದಾಗಿ ಘೊಷಣೆ ಮಾಡಿದರು.
ನಿರ್ಮಲ ಸೀತಾರಾಮನ್
ನಿರ್ಮಲ ಸೀತಾರಾಮನ್
Updated on

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ ಬಜೆಟ್‍ನಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಗಳ ಸ್ಥಾಪನೆ ಮಾಡುವುದಾಗಿ ಘೊಷಣೆ ಮಾಡಿದರು.

ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರ ಕ್ಕೂ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಮಹಾಮಾರಿ ಕೊರೊನಾ ನಂತರ ಶಿಕ್ಷಣ ಕ್ಷೇತ್ರ ಚೇತರಿಸಿಕೊಳ್ಳಲು ಬೇಕಾದ ಕೆಲವು ಅಗತ್ಯ ಅಂಶಗಳನ್ನು ಈ ಬಾರಿ ಬಜೆಟ್‍ನಲ್ಲಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ 2014 ರಿಂದ ಸ್ಥಾಪಿತವಾಗಿರುವ ಅಸ್ತಿತ್ವದಲ್ಲಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದರು.

ಮಕ್ಕಳು ಮತ್ತು ಹದಿಹರೆಯದವರಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು. ಈ ಗ್ರಂಥಾಲಯಗಳಲ್ಲಿ ಭೌಗೋಳಿಕತೆ, ಭಾಷೆಗಳ ಪ್ರಕಾರಗಳನ್ನು ಆಧರಿಸಿ ಗುಣಮಟ್ಟದ ಪುಸ್ತಕಗಳು ಲಭ್ಯವಿರಲಿವೆ.

ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸಂಪನ್ಮೂಲಗಳನ್ನು ಪ್ರವೇಶಿಸಲು ಪಂಚಾಯತ್ ಮತ್ತು ಎಲ್ಲಾ ಹಂತಗಳಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸುವ ಮೂಲಕ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಾಜ್ಯಗಳನ್ನು ಒತ್ತಾಯಿಸಲಾಗುವುದು.

ಓದುವ ಸಂಸ್ಕೃತಿಯನ್ನು ಉತ್ತೇಜಿಸಲು ಮತ್ತು ಸಾಂಕ್ರಾಮಿಕ ಸಮಯದ ಕಲಿಕೆಯ ನಷ್ಟವನ್ನು ಸರಿದೂಗಿಸಲು, ರಾಷ್ಟ್ರೀಯ ಪುಸ್ತಕ ಟ್ರಸ್ಟ್, ಮಕ್ಕಳ ಪುಸ್ತಕ ಟ್ರಸ್ಟ್ ಮತ್ತು ಇತರ ಮೂಲಗಳಿಗೆ ಈ ಭೌತಿಕ ಗ್ರಂಥಾಲಯಗಳಿಗೆ ಪ್ರಾದೇಶಿಕ ಭಾಷೆಗಳಲ್ಲಿ ಮತ್ತು ಇಂಗ್ಲಿಷ್‌ನಲ್ಲಿ ಪುಸ್ತಕಗಳು ಮತ್ತು ಇತರ ವಸ್ತುಗಳನ್ನು ಒದಗಿಸಲು ಪ್ರೋತ್ಸಾಹಿಸಲಾಗುತ್ತದೆ ಎಂದೂ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com