ಮ್ಯಾನ್ ಹೋಲ್
ಮ್ಯಾನ್ ಹೋಲ್

ಒಳಚರಂಡಿ ವ್ಯವಸ್ಥೆಗೆ ಬಿಗ್‌ ಬಜೆಟ್‌ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ 2023-2024 ಅನ್ನು ಮಂಡಿಸುತ್ತಿದ್ದು, ಒಳಚರಂಡಿ ವ್ಯವಸ್ಥೆಯ ಬಗ್ಗೆ ದೊಡ್ಡ ಘೋಷಣೆ ಮಾಡಿದರು.
Published on

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ 2023-2024 ಅನ್ನು ಮಂಡಿಸುತ್ತಿದ್ದು, ಒಳಚರಂಡಿ ವ್ಯವಸ್ಥೆಯ ಬಗ್ಗೆ ದೊಡ್ಡ ಘೋಷಣೆ ಮಾಡಿದರು.

'ಮ್ಯಾನ್‌ಹೋಲ್‌ ಟು ಮೆಷಿನ್‌ ಮೋಡ್‌' ಎಂದು ಕರೆದ ಸಚಿವೆ, ದೇಶದಾದ್ಯಂತ ಚರಂಡಿಗಳು ಮತ್ತು ಸೆಪ್ಟಿಕ್‌ ಟ್ಯಾಂಕ್‌ಗಳನ್ನು ಯಾಂತ್ರಿಕ ಪ್ರಕ್ರಿಯೆಯ ಮೂಲಕ ಡಿ-ಸ್ಲಡ್ಜ್ ಮಾಡಲಾಗುತ್ತದೆ ಎಂದು ಘೋಷಿಸಿದರು.

ಎಲ್ಲಾ ನಗರಗಳು ಮತ್ತು ಪಟ್ಟಣಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಮ್ಯಾನ್‌ಹೋಲ್‌ನಿಂದ ಮೆಷಿನ್ ಹೋಲ್ ಮೋಡ್‌ಗೆ ಶೇ 100 ರಷ್ಟು ಪರಿವರ್ತಿಸಲು ಕೆಲಸ ಮಾಡಲಾಗುವುದು ಎಂದ ಅವರು, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಅನ್ನು ಕೊನೆಗಾಣಿಸುವ ಉದ್ದೇಶದಿಂದ ಈ ಘೋಷಣೆ ಮಾಡಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರು 2017 ರಿಂದ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವಾಗ 400 ಜನರು ಮೃತಪಟ್ಟಿದ್ದಾರೆ ಎಂದು ಸಂಸತ್ತಿಗೆ ತಿಳಿಸಿದ್ದರು.

ಕಳೆದ ವರ್ಷದಂತೆ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ 2023-2024 ಅನ್ನು ಕಾಗದರಹಿತ ರೂಪದಲ್ಲಿ ಮಂಡಿಸಿದರು.

ಸೀತಾರಾಮನ್ ಅವರು 2019ರಲ್ಲಿ ಹಣಕಾಸು ಸಚಿವಾಲಯದ ಉಸ್ತುವಾರಿ ವಹಿಸಿಕೊಂಡ ನಂತರ ಇದು ಐದನೇ ಬಜೆಟ್ ಮಂಡನೆಯಾಗಿದೆ.

ಮಂಗಳವಾರ, ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2022-23ರ ಹಣಕಾಸು ವರ್ಷದ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಕೋವಿಡ್-19 ಸಾಂಕ್ರಾಮಿಕದಿಂದ ಭಾರತದ ಆರ್ಥಿಕ ಚೇತರಿಕೆ ಪೂರ್ಣಗೊಂಡಿದೆ ಮತ್ತು ಆರ್ಥಿಕತೆಯು ಮುಂಬರುವ ಆರ್ಥಿಕ ವರ್ಷದಲ್ಲಿ ಶೇ 6 ರಿಂದ 6.8 ರ ವ್ಯಾಪ್ತಿಯಲ್ಲಿ ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com