ಕೇಂದ್ರ ಬಜೆಟ್ 2023-24: ಸರ್ಕಾರಿ ಒಡೆತನದ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಹಣ ನಿಗದಿ
ಕೇಂದ್ರ ಸರ್ಕಾರದ ಒಡೆತನದ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಸಾಕಷ್ಟು ಹಣವನ್ನು ಮಂಜೂರು ಮಾಡಲಾಗಿದೆ ಮತ್ತು ಹಳೆಯ ವಾಹನಗಳು ಹಾಗೂ ಆಂಬ್ಯುಲೆನ್ಸ್‌ಗಳನ್ನು ಬದಲಾಯಿಸುವಲ್ಲಿ ರಾಜ್ಯಗಳಿಗೆ ಬೆಂಬಲ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ
Published: 01st February 2023 02:09 PM | Last Updated: 01st February 2023 07:51 PM | A+A A-

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: ಕೇಂದ್ರ ಸರ್ಕಾರದ ಒಡೆತನದ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಸಾಕಷ್ಟು ಹಣವನ್ನು ಮಂಜೂರು ಮಾಡಲಾಗಿದೆ ಮತ್ತು ಹಳೆಯ ವಾಹನಗಳು ಹಾಗೂ ಆಂಬ್ಯುಲೆನ್ಸ್‌ಗಳನ್ನು ಬದಲಾಯಿಸುವಲ್ಲಿ ರಾಜ್ಯಗಳಿಗೆ ಬೆಂಬಲ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ
2023-24ರ ಬಜೆಟ್ ಅನ್ನು ಮಂಡಿಸಿದ ಅವರು, ಹಳೆಯ ಮಾಲಿನ್ಯಕಾರಕ ವಾಹನಗಳನ್ನು ಬದಲಿಸುವುದು ಆರ್ಥಿಕತೆಯನ್ನು ಹಸಿರಾಗಿಸುವ ಪ್ರಮುಖ ಭಾಗವಾಗಿದೆ ಎಂದು ಹೇಳಿದರು.
ಕಾರ್ಯಸಾಧ್ಯತೆಯ ಅಂತರ ನಿಧಿಯೊಂದಿಗೆ (viability gap funding) ಪಿಪಿಪಿ ಮೋಡ್ ಮೂಲಕ ಪ್ರಯಾಣಿಕರಿಗೆ ಮತ್ತು ಸರಕು ಸಾಗಣೆದಾರರಿಗೆ ಇಂಧನ ದಕ್ಷ ಮತ್ತು ಕಡಿಮೆ ವೆಚ್ಚದ ಸಾರಿಗೆ ವಿಧಾನವಾಗಿ ಕರಾವಳಿ ಹಡಗು ಸಾಗಣೆಯನ್ನು ಉತ್ತೇಜಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಮೊಬೈಲ್ ತಯಾರಿಕೆಗೆ ಬಳಸುವ ಕೆಲವು ವಸ್ತುಗಳ ಆಮದು ಮೇಲಿನ ಕಸ್ಟಮ್ಸ್ ಸುಂಕ ಕಡಿತ: ನಿರ್ಮಲಾ ಸೀತಾರಾಮನ್
ಇತ್ತೀಚೆಗಷ್ಟೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಒಡೆತನದ ಒಂಬತ್ತು ಲಕ್ಷಕ್ಕೂ ಹೆಚ್ಚು 15 ವರ್ಷಗಳಿಗಿಂತ ಹಳೆಯ ವಾಹನಗಳು ಏಪ್ರಿಲ್ 1 ರಿಂದ ರಸ್ತೆಗಿಳಿಯುವುದಿಲ್ಲ ಮತ್ತು ಹೊಸ ವಾಹನಗಳು ಬರಲಿವೆ ಎಂದು ಹೇಳಿದ್ದರು.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಇತ್ತೀಚಿನ ಅಧಿಸೂಚನೆಯ ಪ್ರಕಾರ, ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಒಡೆತನದ ಬಸ್‌ಗಳು ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಒಡೆತನದ ಎಲ್ಲಾ ವಾಹನಗಳ ನೋಂದಣಿ ರದ್ದುಗೊಳಿಸಲಾಗುತ್ತದೆ ಮತ್ತು ಸ್ಕ್ಯಾಪ್ ಮಾಡಲಾಗುತ್ತದೆ.
ದೇಶದ ರಕ್ಷಣೆಗಾಗಿ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಆಂತರಿಕ ಭದ್ರತೆಯ ನಿರ್ವಹಣೆ ಉದ್ದೇಶಗಳಿಗಾಗಿ ಬಳಸುವ ವಿಶೇಷ ಉದ್ದೇಶದ ವಾಹನಗಳಿಗೆ (ಶಸ್ತ್ರಸಜ್ಜಿತ ಮತ್ತು ಇತರ ವಿಶೇಷ ವಾಹನಗಳಿಗೆ) ಈ ನಿಯಮ ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.