ಕೇಂದ್ರ ಬಜೆಟ್: 'ತೋರಿಸೋದು ಅಷ್ಟು, ಮಾಡೋದು ಇಷ್ಟೆ ಇಷ್ಟು'; ಪ್ರಧಾನಿ ಮೋದಿ ಯೋಗ ಚಿತ್ರದ ಮೂಲಕ ಕಾಂಗ್ರೆಸ್ ಟಾಂಗ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ನೇ ಸಾಲಿನ  ಬಜೆಟ್ ಮಂಡಿಸಿದ್ದು, ಆದಾಯ ತೆರಿಗೆಯಲ್ಲಿ 7 ಲಕ್ಷ ರೂಪಾಯಿವರೆಗೆ ತೆರಿಗೆ ವಿನಾಯ್ತಿ ನೀಡಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಆದಾಯ ತೆರಿಗೆಯಲ್ಲಿ 7 ಲಕ್ಷ ರೂಪಾಯಿವರೆಗೆ ತೆರಿಗೆ ವಿನಾಯ್ತಿ ನೀಡಿದ್ದಾರೆ.

ಸಂಸತ್ತಿನಲ್ಲಿ ನಿರ್ಮಾಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣ ಮುಕ್ತಾಯಗೊಳಿಸುತ್ತಿದ್ದಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರ ಆಕಾಶದೆತ್ತರಕ್ಕೆ ಭರವಸೆಗಳನ್ನು ನೀಡುತ್ತದೆ. ಆದರೆ ಜಾರಿಗೊಳಿಸುವುದು ಮಾತ್ರ ಶೂನ್ಯ ಎಂಬ ಅರ್ಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಮಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿದೆ.

"ಬಜೆಟ್ ಖತಮ್ ಹುವಾ. ರಿಯಾಲಿಟಿ, ಕ್ಲೈಮ್" ಎಂದು ಬರೆದು ಪ್ರಧಾನಿ ಮೋದಿ ಅವರ ಚಿತ್ರವನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಈ ಬಜೆಟ್ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದ್ದು, 2024 ರ ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗುವುದರಿಂದ ಈ ಬಜೆಟ್ ಹೆಚ್ಚು ಮಹತ್ವವ ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com