ಒಳಚರಂಡಿ ವ್ಯವಸ್ಥೆಗೆ ಬಿಗ್ ಬಜೆಟ್ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ 2023-2024 ಅನ್ನು ಮಂಡಿಸುತ್ತಿದ್ದು, ಒಳಚರಂಡಿ ವ್ಯವಸ್ಥೆಯ ಬಗ್ಗೆ ದೊಡ್ಡ ಘೋಷಣೆ ಮಾಡಿದರು.
Published: 01st February 2023 12:54 PM | Last Updated: 01st February 2023 07:37 PM | A+A A-

ಮ್ಯಾನ್ ಹೋಲ್
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ 2023-2024 ಅನ್ನು ಮಂಡಿಸುತ್ತಿದ್ದು, ಒಳಚರಂಡಿ ವ್ಯವಸ್ಥೆಯ ಬಗ್ಗೆ ದೊಡ್ಡ ಘೋಷಣೆ ಮಾಡಿದರು.
'ಮ್ಯಾನ್‌ಹೋಲ್ ಟು ಮೆಷಿನ್ ಮೋಡ್' ಎಂದು ಕರೆದ ಸಚಿವೆ, ದೇಶದಾದ್ಯಂತ ಚರಂಡಿಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಯಾಂತ್ರಿಕ ಪ್ರಕ್ರಿಯೆಯ ಮೂಲಕ ಡಿ-ಸ್ಲಡ್ಜ್ ಮಾಡಲಾಗುತ್ತದೆ ಎಂದು ಘೋಷಿಸಿದರು.
ಎಲ್ಲಾ ನಗರಗಳು ಮತ್ತು ಪಟ್ಟಣಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಮ್ಯಾನ್‌ಹೋಲ್‌ನಿಂದ ಮೆಷಿನ್ ಹೋಲ್ ಮೋಡ್‌ಗೆ ಶೇ 100 ರಷ್ಟು ಪರಿವರ್ತಿಸಲು ಕೆಲಸ ಮಾಡಲಾಗುವುದು ಎಂದ ಅವರು, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಅನ್ನು ಕೊನೆಗಾಣಿಸುವ ಉದ್ದೇಶದಿಂದ ಈ ಘೋಷಣೆ ಮಾಡಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರು 2017 ರಿಂದ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವಾಗ 400 ಜನರು ಮೃತಪಟ್ಟಿದ್ದಾರೆ ಎಂದು ಸಂಸತ್ತಿಗೆ ತಿಳಿಸಿದ್ದರು.
ಇದನ್ನೂ ಓದಿ: ಕೇಂದ್ರ ಬಜೆಟ್ 2023: ಚುನಾವಣೆ ಮೇಲೆ ಕಣ್ಣು; ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೆರವು
ಕಳೆದ ವರ್ಷದಂತೆ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ 2023-2024 ಅನ್ನು ಕಾಗದರಹಿತ ರೂಪದಲ್ಲಿ ಮಂಡಿಸಿದರು.
ಸೀತಾರಾಮನ್ ಅವರು 2019ರಲ್ಲಿ ಹಣಕಾಸು ಸಚಿವಾಲಯದ ಉಸ್ತುವಾರಿ ವಹಿಸಿಕೊಂಡ ನಂತರ ಇದು ಐದನೇ ಬಜೆಟ್ ಮಂಡನೆಯಾಗಿದೆ.
ಮಂಗಳವಾರ, ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2022-23ರ ಹಣಕಾಸು ವರ್ಷದ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಕೋವಿಡ್-19 ಸಾಂಕ್ರಾಮಿಕದಿಂದ ಭಾರತದ ಆರ್ಥಿಕ ಚೇತರಿಕೆ ಪೂರ್ಣಗೊಂಡಿದೆ ಮತ್ತು ಆರ್ಥಿಕತೆಯು ಮುಂಬರುವ ಆರ್ಥಿಕ ವರ್ಷದಲ್ಲಿ ಶೇ 6 ರಿಂದ 6.8 ರ ವ್ಯಾಪ್ತಿಯಲ್ಲಿ ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.