ರಾಜ್ಯಗಳ ಸಕ್ರಿಯ ಒಳಗೊಳ್ಳುವಿಕೆಯೊಂದಿಗೆ ಪ್ರವಾಸೋದ್ಯಮಕ್ಕೆ ಒತ್ತು: ನಿರ್ಮಲಾ ಸೀತಾರಾಮನ್
ಪ್ರವಾಸೋದ್ಯಮ ಪ್ರಚಾರವನ್ನು ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ 'ಮಿಷನ್ ಮೋಡ್'ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2023-24 ರ ಕೇಂದ್ರ ಬಜೆಟ್‌ನಲ್ಲಿ ಬುಧವಾರ ಘೋಷಿಸಿದ್ದಾರೆ.
Published: 01st February 2023 01:15 PM | Last Updated: 01st February 2023 07:40 PM | A+A A-

ನಿರ್ಮಲಾ ಸೀತಾರಾಮನ್
ನವದೆಹಲಿ: ಪ್ರವಾಸೋದ್ಯಮ ಪ್ರಚಾರವನ್ನು ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ 'ಮಿಷನ್ ಮೋಡ್'ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2023-24 ರ ಕೇಂದ್ರ ಬಜೆಟ್‌ನಲ್ಲಿ ಬುಧವಾರ ಘೋಷಿಸಿದ್ದಾರೆ.
ತಮ್ಮ ಭಾಷಣದಲ್ಲಿ, ದೇಶವು ದೇಶೀಯ ಮತ್ತು ವಿದೇಶಿ ಪ್ರವಾಸಿಗರಿಗೆ 'ಅಗಾಧ ಆಕರ್ಷಣೆ' ನೀಡುತ್ತದೆ. ಪ್ರವಾಸೋದ್ಯಮದಲ್ಲಿ ಹೆಚ್ಚಿನ ಅವಕಾಶವಿದೆ. ಈ ವಲಯವು ವಿಶೇಷವಾಗಿ ಯುವಕರಿಗೆ ಉದ್ಯೋಗಗಳು ಮತ್ತು ಉದ್ಯಮಶೀಲತೆಗೆ ದೊಡ್ಡ ಅವಕಾಶಗಳನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು.
ಇದನ್ನೂ ಓದಿ: ಕೇಂದ್ರ ಬಜೆಟ್ 2023: ಚುನಾವಣೆ ಮೇಲೆ ಕಣ್ಣು; ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೆರವು
'ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮಿಷನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸಲಾಗುವುದು' ಎಂದು ಸಚಿವರು ಹೇಳಿದರು.