ಕೇಂದ್ರ ಬಜೆಟ್ 2023: ಕೃಷಿಗೆ ಸಂಬಂಧಿಸಿದ ಸ್ಟಾರ್ಟ್ ಅಪ್ ಗಳಿಗೆ ಆದ್ಯತೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2023-24 ನೇ ಸಾಲಿನ ಬಜೆಟ್  ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಐದನೇ ಬಜೆಟ್ ಆಗಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2023-24 ನೇ ಸಾಲಿನ ಬಜೆಟ್  ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಐದನೇ ಬಜೆಟ್ ಆಗಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇದೇ ವೇಳೆ ಬಜೆಟ್‌ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತ, ಇದು ಅಮೃತಕಾಲದ ಅವರ ಮೊದಲ ಬಜೆಟ್. ಅಂತಾರಾಷ್ಟ್ರೀಯ ಆರ್ಥಿಕ ಕುಸಿತದ ಹೊರತಾಗಿಯೂ, ಆರ್ಥಿಕ ಬೆಳವಣಿಗೆಯ ದರವು ಶೇಕಡಾ 7 ರಷ್ಟಿತ್ತು. ಈ ಬಜೆಟ್ ಅಗತ್ಯವಿರುವ ಜನರಿಗಾಗಿ ಇದೆ. ಅನೇಕ ಅದ್ಭುತ ಹೆಜ್ಜೆಗಳಿಂದಾಗಿ ವಿಶ್ವದಲ್ಲಿ ಭಾರತದ ಸ್ಥಾನಮಾನ ಹೆಚ್ಚಾಗಿದೆ. ಕೋವಿಡ್ ಸಮಯದಲ್ಲಿ, ಉಚಿತ ಪಡಿತರದೊಂದಿಗೆ ಯಾರೂ ಹಸಿವಿನಿಂದ ಮಲಗದಂತೆ ನಾವು ಖಚಿತಪಡಿಸಿದ್ದೇವೆ.

ಈ ಬಾರಿಯ ಬಜೆಟ್ ನಲ್ಲಿ ರೈತರಿಗೆ ಯುವಕರು, ಮಹಿಳೆಯರು, ಒಬಿಸಿ ಈ ಸಮುದಾಯಕ್ಕೆ ಬಜೆಟ್ ನಲ್ಲಿ ಪೋಕಸ್ ಮಾಡಲಾಗಿದೆ. ಆಧಾರ್, ಯುಪಿಐ, ಕೊವಿನ್ ವಿಶ್ವಮಾನ್ಯತೆ ಸಿಕ್ಕಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಗೆ 2 ಲಕ್ಷ ಕೋಟಿ ರೂ. ಮಿಸಲಿಡಲಾಗಿದೆ. ಒಂದು ವರ್ಷ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮಹಿಳೆಯರ ಆರ್ಥಿಕ ಸಬಲೀಕರಣದ ಗುರಿ ಹೊಂದಲಾಗಿದ್ದು, ಕರಕುಶಲಕರ್ಮಿಗಳಿಗೆ ನುತನ ಯೋಜನೆ ಘೋಷಣೆ ಮಾಡಲಾಗಿದ್ದು, ಪ್ರಧಾನಿ ವಿಶ್ವಕರ್ಮ ಕೌಶಲ್ಯ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಜ್ವಲ ಯೋಜನೆಯಡಿ 6 ಕೋಟಿ ಜನರಿಗೆ ಸಂಪರ್ಕ, ಆರ್ಥಿಕತೆಯು ಹೆಚ್ಚು ಔಪಚಾರಿಕವಾಗಿದೆ. ಸಿರಿಧಾನ್ಯಗಳ ಕೃಷಿಗೆ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು, ಶ್ರೀ ಅನ್ನ ಜೋಳ, ಶ್ರೀ ಅನ್ನ ರಾಗಿ, ಸಜ್ಜೆ ಸಿರಿಧಾನ್ಯಗಳ ಯೋಜನೆ ಜಾರಿ, ಹಸಿರು ಕ್ರಾಂತಿ ಸರ್ವರನ್ನು ಒಳಗೊಂಡ ಅಭಿವೃದ್ಧಿ, ಮಹಿಳೆಯರ ಆರ್ಥಿಕ ಸಬಲೀಕರಣ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಜೆಟ್ ನಲ್ಲಿ ಸಪ್ತ ಸೂತ್ರಗಳನ್ನು ಅಳವಡಿಸಲಾಗಿದೆ. ರೈತರು, ಪರಿಶಿಷ್ಟ ಜಾತಿಯ ಮಹಿಳೆಯರಿಂದ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗಿದೆ. ವಿಶೇಷವಾಗಿ, ಜಮ್ಮು ಮತ್ತು ಕಾಶ್ಮೀರ ಲಡಾಖ್ಗೆ ಒತ್ತು ನೀಡಲಾಗಿದೆ.ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ರಚಿಸಲಾಗುವುದು. ಸ್ಟಾರ್ಟ್ ಅಪ್ ಗಳ ಬೆಳವಣಿಗೆಗೆ ಅಂತರ್ಗತ ಪರಿಹಾರ ಇರುತ್ತದೆ. ಕೃಷಿ-ಸ್ಟಾರ್ಟ್ ಅಪ್ ಗಳನ್ನು ತೆರೆಯಲು ಅವರನ್ನು ಪ್ರೋತ್ಸಾಹಿಸಲು ಕೃಷಿ ವರ್ಧನೆ ನಿಧಿಯನ್ನು ನೀಡಲಾಗುವುದು. ನಾವು ವಿಶ್ವದಲ್ಲೇ ಅತಿ ದೊಡ್ಡ ಆಹಾರ ಧಾನ್ಯಗಳ ಉತ್ಪಾದಕರು ಮತ್ತು ಎರಡನೇ ಅತಿದೊಡ್ಡ ರಫ್ತುದಾರರಾಗಿದ್ದೇವೆ ಎಂದರು.

ಕೃಷಿಗೆ ಸಂಬಂಧಿಸಿದ ಸ್ಟಾರ್ಟ್ ಅಪ್ ಗಳಿಗೆ ಆದ್ಯತೆ: ನಮ್ಮ ಆರ್ಥಿಕ ಕಾರ್ಯಸೂಚಿಯು ನಾಗರಿಕರಿಗೆ ಅವಕಾಶಗಳನ್ನು ಸುಗಮಗೊಳಿಸುವುದು, ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸುವುದು ಮತ್ತು ಸ್ಥೂಲ ಆರ್ಥಿಕ ಸ್ಥಿರತೆಯನ್ನು ಬಲಪಡಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಕೃಷಿಗೆ ಸಂಬಂಧಿಸಿದ ಸ್ಟಾರ್ಟ್ ಅಪ್ ಗಳಿಗೆ ಆದ್ಯತೆ ನೀಡಲಾಗುವುದು. ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್ ಅಪ್ ಗಳನ್ನು ಪ್ರೋತ್ಸಾಹಿಸಲು ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಬೇಕು. ಭದ್ರಾ ಮೇಲ್ದೆಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ ಮಾಡಲಾಗಿದೆ. ಉದ್ಯೋಗ ಸೃಷ್ಟಿಗೆ 10 ಲಕ್ಷ ಕೋಟಿ ರೂ. ಮೀಸಲಿಡಲಾಗುವುದು. ಜಿಡಿಪಿಯ ಶೇ. 3.3 ರಷ್ಟು ಉದ್ಯೋಗ ಸೃಷ್ಟಿಗೆ ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಮಕ್ಕಳು ಮತ್ತು ಯುವಜನರಿಗಾಗಿ ಡಿಜಿಟಲ್ ಲೈಬ್ರರಿಗಳು ಸಿದ್ಧಪಡಿಸಲಾಗುತ್ತಿದೆ. ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯವನ್ನು ಪಂಚಾಯತ್ ಮತ್ತು ವಾರ್ಡ್ ಮಟ್ಟಕ್ಕೆ ತೆರೆಯಲಾಗುವುದು. ಪ್ರಾದೇಶಿಕ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪುಸ್ತಕಗಳು ಲಭ್ಯವಿರುತ್ತವೆ. ವಯಸ್ಸಿಗೆ ಅನುಗುಣವಾಗಿ ಪುಸ್ತಕಗಳು ಲಭ್ಯವಿರುತ್ತವೆ. ರಾಜ್ಯಗಳು ಮತ್ತು ಅವುಗಳಿಗಾಗಿ ನೇರ ಗ್ರಂಥಾಲಯಗಳನ್ನು ಪ್ರೋತ್ಸಾಹಿಸಲಾಗುವುದು.

ರೈಲ್ವೆಗೆ 2.4 ಲಕ್ಷ ಕೋಟಿ ರೂ. ಪರಿಶಿಷ್ಟ ಪಂಗಡಕ್ಕೆ 15,000 ಕೋಟಿ ರೂ. ಪಿಎಂ ಆವಾಸ್ ಯೋಜನೆಗೆ ಹಂಚಿಕೆಯು 66% ರಷ್ಟು ಹೆಚ್ಚಾಗುತ್ತದೆ. ಪಿಎಂ ವಸತಿ ಯೋಜನೆಗೆ 79 ಸಾವಿರ ಕೋಟಿ ರೂ. ಕರ್ನಾಟಕದ ಬರ ನಿರ್ವಹಣೆಗೆ 5,300 ಕೋಟಿ ರೂ. ಬಂಡವಾಳ ಹೂಡಿಕೆ 10 ಲಕ್ಷ ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com