

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ನಿಂದ ನವೆಂಬರ್ ವರೆಗಿನ ಅವಧಿಯಲ್ಲಿ ಮ್ಯೂಚ್ಯುವಲ್ ಫಂಡ್ ಕ್ಷೇತ್ರದಲ್ಲಿ ಹೂಡಿಕೆದಾರರು 1.5 ಲಕ್ಷ ಕೋಟಿ ಹೂಡಿಕೆ ಮಾಡಿದ್ದಾರೆ. ಈ ಕ್ಷೇತ್ರದ ವಿವಿಧ ಯೋಜನೆಗಳಲ್ಲಿ ಹೂಡಿಕೆದಾರರು ತಮ್ಮ ಹಣ ತೊಡಗಿಸಿಕೊಂಡಿದ್ದಾರೆ. ಈ ಮೊತ್ತ 2012-13ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡಿದ ಮೊತ್ತಕ್ಕಿಂತ ಎರಡರಷ್ಟಾಗಿದೆ.