

ದೇಶದ ವಿದ್ಯುತ್ ಕ್ಷೇತ್ರದ ಬಗೆಗಿನ ವರದಿಯನ್ನು ಕೇಂದ್ರ ಸರ್ಕಾರ ಶೀಘ್ರ ಬಿಡುಗಡೆ ಮಾಡಲಿದೆ. ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಸುಧಾರಣೆಗಳ ಬಗ್ಗೆ ಈ ವರದಿಯಲ್ಲಿ ಪ್ರಮುಖವಾಗಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ. ವಿದ್ಯುತ್ ವಿತರಣಾ ವ್ಯವಸ್ಥೆ, ವಿದ್ಯುತ್ ಕ್ಷೇತ್ರಕ್ಕೆ ಸಂಬಂಧಿಸಿದ ಕಾನೂನು ಈ ಎಲ್ಲ ವಿಚಾರಗಳ ಬಗ್ಗೆಯೂ ವರದಿಯಲ್ಲಿ ಬೆಳಕು ಚೆಲ್ಲಲಾಗಿದೆ ಎಂದು ಗೊತ್ತಾಗಿದೆ.