ವಾಣಿಜ್ಯ

ಕೃಷಿ ಅಭಿವೃದ್ಧಿಯತ್ತ ಬ್ಯಾಂಕ್ ಗಮನಹರಿಸಲಿ: ಕಾಮತ್

Published On :

ಕ.ಪ್ರ.ವಾರ್ತೆ, ಬೆಂಗಳೂರು, ನ. 24-
ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಲಾಭಗಳಿಸಲು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ವಿಜಯ ಬ್ಯಾಂಕ್ ಅಧ್ಯಕ್ಷ ಎಚ್.ಎಸ್. ಉಪೇಂದ್ರ ಕಾಮತ್ ಹೇಳಿದರು.
ಅಖಿಲ ಭಾರತೀಯ ವಿಜಯ ಬ್ಯಾಂಕ್ ಅಧಿಕಾರಿಗಳ ಸಂಘ ಶುಕ್ರವಾರ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ 15ನೇ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜನರಿಗೆ ಬ್ಯಾಂಕ್ ಸೌಲಭ್ಯಗಳು ತಲುಪುತ್ತಿಲ್ಲ. ಇದರಿಂದಾಗಿ ಗ್ರಾಮೀಣ ಭಾಗದಲ್ಲಿನ ಶಾಖೆಗಳು ಕಡಿಮೆಯಾಗಿವೆ. ನಾವು ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡುವ ಮೂಲಕ ರೈತರನ್ನು ಬ್ಯಾಂಕ್ ಕಡೆ ಸೆಳೆಯಬೇಕು. ಇದರಿಂದಾಗಿ ನಾವು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ನಾವು 2 ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ ಹೊಂದಲಾಗಿತ್ತು. ಆ ಗುರಿ ಮುಟ್ಟಿದ್ದೇವೆ. ವಿಜಯ ಬ್ಯಾಂಕ್ ಬಡ್ಡಿದರದಲ್ಲಿ ಶೇ.29ರಷ್ಟು ಮತ್ತು ವಹಿವಾಟು ಆದಾಯದಲ್ಲಿ ಶೇ.27ರಷ್ಟು ಆದಾಯಗಳಿಸಿದ್ದೇವೆ. ಒಟ್ಟಾರೆ ಶೇ.10.5ರಷ್ಟು ನಿವ್ವಳ ಲಾಭಗಳಿಸಿದ್ದೇವೆ ಎಂದರು.
ಸಮಾವೇಶದಲ್ಲಿ ವಿಜಯಬ್ಯಾಂಕ್ ಕಾರ್ಯಕಾರಿ ನಿರ್ದೇಶಕರಾದ ಕೆ.ಆರ್. ಶೆಣೈ, ಆರ್ಥಿಕ ತಜ್ಞ ಎಂ.ಆರ್. ವೆಂಕಟೇಶ್, ಹರವೀಂದ್ರ ಸಿಂಗ್ ಸೇರಿದಂತೆ ಸುಮಾರು 1,200ಕ್ಕೂ ಅಧಿಕ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.