ಸಾಂದರ್ಭಿಕ ಚಿತ್ರ
ವಾಣಿಜ್ಯ
ಪಿಂಚಣಿದಾರರ 'ಸಂಕಲ್ಪ' ಸೇವೆ
ಲಕ್ಷಾಂತರ ಪಿಂಚಣಿದಾರರಿಗೆ ಸಿಹಿಸುದ್ದಿ. ವಿವಿಧ ಜನಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಪಿಂಚಣಿದಾರರ ಸೇವೆಯನ್ನು...
ನವದೆಹಲಿ: ಲಕ್ಷಾಂತರ ಪಿಂಚಣಿದಾರರಿಗೆ ಸಿಹಿಸುದ್ದಿ. ವಿವಿಧ ಜನಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಪಿಂಚಣಿದಾರರ ಸೇವೆಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಪಿಂಚಣಿ ಮತ್ತು ಪಿಂಚಣಿದಾರರ ಕ್ಷೇಮಾಭಿವೃದ್ಧಿ ಇಲಾಖೆ (ಡಿಪಿಪಿಡಬ್ಯು)ಯು 'ಸಂಕಲ್ಪ' ಎಂಬ ಯೋಜನೆಯನ್ನು ಆರಂಭಿಸಿದ್ದು, ಸ್ವಯಂಪ್ರೇರಿತರಾಗಿ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಬಯಸುವ ಪಿಂಚಣಿದಾರರಿಗೆ ಅವಕಾಶ ನೀಡಲು ಮುಂದಾಗಿದೆ.
ಪಿಂಚಣಿದಾರರ ಅನುಭವ ಮತ್ತು ಕೌಶಲವನ್ನು ಅರ್ಥಪೂರ್ಣ ಸಾಮಾಜಿಕ ಚಟುವಟಿಕೆಗಳಲ್ಲಿ ಬಳಸುವ ಉದ್ದೇಶದಿಂದ ಪ್ರಾಯೋಗಿಕವಾಗಿ ಈ ಯೋಜನೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ