

ನವದೆಹಲಿ: ವೇತನ ಪರಿಷ್ಕರಣೆಗೆ ಆಗ್ರಹಿಸಿ ನ.12ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಬ್ಯಾಂಕ್ ಕೆಲಸಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿವೆ.
ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ, ಭಾರತೀಯ ಬ್ಯಾಂಕ್‌ಗಳ ಒಕ್ಕೂಟ (ಐಬಿಎ) ಹಾಗೂ ಯುಎಫಅಬಿಯು ನಡುವೆ ಸೋಮವಾರ ನಡೆದ ಮಾತುಕತೆ ವಿಫಲವಾಗಿದೆ.
ಈ ಮೊದಲು, ಬ್ಯಾಂಕ್‌ನ ಸಿಬ್ಬಂದಿ ವೇತನವನ್ನು ಶೇ.25ಕ್ಕೆ ಏರಿಸಬೇಕೆಂದು ಪಟ್ಟು ಹಿಡಿದಿದ್ದ ಯುಎಫ್‌ಬಿಯು, ಮಾತುಕತೆ ವೇಳೆ ಕನಿಷ್ಠ ಶೇ.23ರಷ್ಟಾದರೂ ಏರಿಕೆ ಮಾಡಬೇಕೆಂದು ಆಗ್ರಹಿಸಿತು.
ಆದರೆ, ಐಬಿಎ ಮಾತ್ರ ಶೇ.11ರಷ್ಟು ಏರಿಸುವುದಾಗಿ ಖಡಾಖಂಡಿತವಾಗಿ ಹೇಳಿತು.