
ನವದೆಹಲಿ: ಚೀನಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಪ್ರಸ್ತುತ ಸಂದರ್ಭ ಭಾರತಕ್ಕೆ ಉತ್ತಮ ಅವಕಾಶವಾಗಿದೆ.
ಬಡ್ಡಿದರಗಳನ್ನು ಕಡಿತಗೊಳಿಸುವುದರೊಂದಿಗೆ ಸುಧಾರಣೆಗಳನ್ನು ಕೈಗೊಳ್ಳುವ ಮೂಲಕ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗಾರಿಯಾ ಹೇಳಿದ್ದಾರೆ. ಕೇಂದ್ರ ಸರ್ಕಾರ ಜಿಎಸ್‍ಟಿ ಮಸೂದೆ ಜಾರಿಗೆ ತಂದರೆ ರಾಜ್ಯ ಸರ್ಕಾರಗಳು ಕೈಗಾರಿಕೆಗಳಿಗೆ ಅನುಕೂಲವಾದ ಭೂಸ್ವಾಧೀನ ನೀತಿ ರೂಪಿಸಬೇಕು ಎಂದಿದ್ದಾರೆ.
Advertisement