ವಾಣಿಜ್ಯ ಪ್ರಕರಣಗಳ ವಿಲೇವಾರಿಗೆ ರಾಷ್ಟ್ರೀಯ ನೀತಿ: ಸದಾನಂದಗೌಡ

ವಾಣಿಜ್ಯ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯಗಳ ಶೀಘ್ರ ಇತ್ಯರ್ಥಕ್ಕಾಗಿ ಸಹಕಾರಿಯಾಗುವಂತೆ ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ನೀತಿಯನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ಕೇಂದ್ರ ಸಚಿವ ಸದಾನಂದಗೌಡ
ಕೇಂದ್ರ ಸಚಿವ ಸದಾನಂದಗೌಡ

ನವದೆಹಲಿ: ವಾಣಿಜ್ಯ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯಗಳ ಶೀಘ್ರ ಇತ್ಯರ್ಥಕ್ಕಾಗಿ ಸಹಕಾರಿಯಾಗುವಂತೆ ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ನೀತಿಯನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು,  ನ್ಯಾಯಾಲಯದಲ್ಲಿರುವ ವಾಣಿಜ್ಯ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಮತ್ತು ಪದೆ ಪದೇ ನ್ಯಾಯಾಲಯಗಳಿಗೆ ಅಲೆಯವುದನ್ನು ತಪ್ಪಿಸುವ ಉದ್ದೇಶದಿಂದ ವಾಣಿಜ್ಯ ಪ್ರಕರಣಗಳ ವಿಲೇವಾರಿಗೆ ಸಹಕಾರಿಯಾಗುವಂತೆ ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ನೀತಿಯನ್ನು ಸಿದ್ಧಪಡಿಸಿದೆ.

ಪ್ರಾರಂಭದಲ್ಲಿ ಸುಗ್ರೀವಾಜ್ಞೆಯ ಮೂಲಕ ಕಾನೂನು ತರುವ ಉದ್ದೇಶವಿತ್ತು. ಪ್ರಸ್ತುತ ಅದನ್ನು ಕೈಬಿಟ್ಟು ಕರಡು ಸಿದ್ಧಪಡಿಸಲಾಗಿದ್ದು, ಸದ್ಯದಲ್ಲಿಯೇ ಸಚಿವ ಸಂಪುಟದ ಮುಂದೆ ತರಲಾಗುವುದು. ಬಳಿಕ ಮುಂಗಾರು ಅಧಿವೇಶನದಲ್ಲಿ ಹೊಸ ಕಾನೂನನ್ನು ಮಂಡಿಸಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ "ದೇಶದ ವಿವಿಧ ನ್ಯಾಯಾಲಯದಲ್ಲಿರುವ ಉಪಯೋಗಕ್ಕೆ ಬಾರದ ಶೇ.46ರಷ್ಟು ಕಾನೂನುಗಳನ್ನು ರದ್ದು ಮಾಡುವಂತೆ ಇಲಾಖೆ ವತಿಯಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಸದಾನಂದಗೌಡ ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com