

ನವದೆಹಲಿ: ಸ್ಟಾರ್ಟ್ ಅಪ್ ಸಂಸ್ಥೆಗಳಿಗೆ ಸಂಬಂಧಿಸಿದಂತೆ ರಚಿಸಿದ ಸಮಿತಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರನ್ನು ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‍ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಿಸಿದೆ.
ಸಮಾನಾಂತರ ಬಂಡವಾಳ ನೀತಿ ಸಲಹಾ ಸಮಿತಿ (ಎಐಪಿಎಸಿ)ಯಲ್ಲಿ 18 ಮಂದಿ ಸದಸ್ಯರು ಇರಲಿದ್ದಾರೆ. ಅದರಲ್ಲಿ ಕೈಗಾರಿಕೆ, ಖಾಸಗಿ ಈಕ್ವಿಟಿ ಸಂಸ್ಥೆಗಳು, ಸೆಬಿ, ಆರ್‍ಬಿಐ ಮತ್ತು ಹಣಕಾಸು ಸಚಿವಾಲಯದ ಪ್ರತಿನಿಧಿಗಳು ಸದಸ್ಯರಾಗಿರುತ್ತಾರೆ. ಬದಲಿ ಹೂಡಿಕೆ ವ್ಯವಸ್ಥೆ ಮತ್ತು ಭಾರತದಲ್ಲಿ ಸ್ಟಾರ್ಟ್ ಅಪ್ ಕಂಪನಿಗಳ ವಹಿವಾಟಿನ ಬಗ್ಗೆ ಸಮಿತಿ ಅಧ್ಯಯನ ನಡೆಸಿ ಸೆಬಿಗೆ ವರದಿ ನೀಡಲಿದೆ.