ರುಪಾಯಿ ಮೌಲ್ಯ
ವಾಣಿಜ್ಯ
ಡಾಲರ್ ಎದುರು ಮತ್ತೆ ಕುಸಿದ ರುಪಾಯಿ ಮೌಲ್ಯ
ಡಾಲರ್ ಎದುರು ರುಪಾಯಿ ಮೌಲ್ಯ ಕಳೆದ ಎರಡು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಶುಕ್ರವಾರದ ಪ್ರಾರಂಭಿಕ ವಹಿವಾಟಿನಲ್ಲೇ ರುಪಾಯಿ ಮೌಲ್ಯ ಕುಸಿತ ಕಂಡಿದೆ.
ಮುಂಬೈ: ಡಾಲರ್ ಎದುರು ರುಪಾಯಿ ಮೌಲ್ಯ ಕಳೆದ ಎರಡು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಶುಕ್ರವಾರದ ಪ್ರಾರಂಭಿಕ ವಹಿವಾಟಿನಲ್ಲೇ ರುಪಾಯಿ ಮೌಲ್ಯ ಕುಸಿತ ಕಂಡಿದೆ.
ಅಮೆರಿಕಾ ಕರೆನ್ಸಿ ಚೇತರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆಯಾಗುತ್ತಿದೆಯಾದರೂ, ಸೆಂಟ್ರಲ್ ಬ್ಯಾಂಕ್ ವಹಿವಾಟುಗಳಿಂದ ಅಲ್ಪಪ್ರಮಾಣದ ಚೇತರಿಕೆಯಾಗಿದೆ.
ಪ್ರತಿ ಡಾಲರ್ ಗೆ ರೂಪಾಯಿ ಮೌಲ್ಯ 66 .88 ರಷ್ಟಾಗಿದ್ದು, 40 ಪೈಸೆಯಷ್ಟು ಕುಸಿತ ಕಂಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಆಣತಿಯಂತೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು ಡಾಲರ್ ಗಳನ್ನು ಮಾರಾಟ ಮಾಡುತ್ತಿರುವುದರಿಂದ ರುಪಾಯಿ ಮೌಲ್ಯ ಕುಸಿತದ ನಷ್ಟವನ್ನು ಕಡಿಮೆ ಮಾಡಿದೆ ಎಂದು ವಿಶ್ಲೇಷಿಸಲಾಗಿದೆ.
ಬಿಎಸ್ಇ ಸೂಚ್ಯಂಕ 150 ಅಂಕಗಳಷ್ಟು ಏರಿಕೆಯಾಗಿರುವುದೂ ಸಹ ರುಪಾಯಿ ಮೌಲ್ಯ ಚೇತರಿಸಿಕೊಳ್ಳಲು ಸಹಕಾರಿಯಾಗಿದ್ದು ಬೆಳಿಗ್ಗೆ 11 :45 ರಲ್ಲಿ ರುಪಾಯಿ ಮೌಲ್ಯ ಪ್ರತಿ ಡಾಲರ್ ಗೆ 66 .74 ನಷ್ಟಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ