ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಲಕ್ಷ ಕೋಟಿ ಹೂಡಿಕೆ ಪ್ರಸ್ತಾವ

ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ತಯಾರಿಕೆಗೆ ಸಂಬಂಧಿಸಿದಂತೆ ರು.1 ಲಕ್ಷ ಕೋಟಿ ಹೂಡಿಕೆ ಪ್ರಸ್ತಾವನೆಗಳು ಸರ್ಕಾರದ ಮುಂದಿವೆ ಎಂದು ಕೇಂದ್ರ...
ರವಿಶಂಕರ್ ಪ್ರಸಾದ್
ರವಿಶಂಕರ್ ಪ್ರಸಾದ್

ನವದೆಹಲಿ: ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ತಯಾರಿಕೆಗೆ ಸಂಬಂಧಿಸಿದಂತೆ ರು.1 ಲಕ್ಷ ಕೋಟಿ ಹೂಡಿಕೆ ಪ್ರಸ್ತಾವನೆಗಳು ಸರ್ಕಾರದ ಮುಂದಿವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದರು.

ಕಳೆದ 14 ತಿಂಗಳಿಂದ ದೊಡ್ಡ ಪ್ರಮಾಣದಲ್ಲಿ ಎಲೆಕ್ಟ್ರಾನಿಕ್ ಕ್ಲಸ್ಟರ್‍ಗಳ ಸ್ಥಾಪನೆಗೆ ಉತ್ತೇಜನ ನೀಡಲಾಗುತ್ತಿದೆ. ಸುಧಾರಿತ ವಿಶೇಷ ಪ್ರೋತ್ಸಾಹ ಯೋಜನೆ (ಎಂಎಸ್ ಐಪಿಎಸ್)ಯಡಿ ಹೂಡಿಕೆದಾರರಿಗೆ ಸೌಲಭ್ಯ ನೀಡಲಾಗುತ್ತಿದೆ ಎಂದು ಎಲೆಕ್ಟ್ರಾನಿಕ್ಸ್ ಎಂಜಿನಿಯರ್‍ಗಳ ಸಂಸ್ಥೆಯ ಸಮಾರಂಭದಲ್ಲಿ ಮಾತ ನಾಡಿದ ಅವರು ತಿಳಿಸಿದ್ದಾರೆ.

ಈ ಯೋಜನೆಯಡಿ ಶೇ.20ರಷ್ಟು ಸಬ್ಸಿಡಿ ನೀಡಲಾಗುವುದು. ಚಿಪ್ ತಯಾರಿಕೆ ಕ್ಷೇತ್ರಕ್ಕೆ ಸಂಪೂರ್ಣ ವಿನಾಯಿತಿ ನೀಡಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com