
ನವದೆಹಲಿ: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಪ್ರಕ್ಷುಬ್ಧತೆಯಿಂದ ಭಾರತಕ್ಕೆ ಹೆಚ್ಚಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಕೈಗಾರಿಕೋದ್ಯಮಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸಭೆಯಲ್ಲಿ ಭಾಗವಹಿಸದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಜೆಟ್ಲಿ, ಸಭೆಯಲ್ಲಿ 27 ಮಂದಿ ಇತ್ತೀಚಿನ ಜಾಗತಿಕ ಬೆಳವಣಿಗೆ ಹಾಗೂ ಭಾರತದ ಮೇಲೆ ಅದರ ಪರಿಣಾಮದ ಬಗ್ಗೆ ಮಾತನಾಡಿದರು, ಈ ಪೈಕಿ ಬಹುತೇಕರು ನಾವು ಅಸ್ಥಿರತೆಗಳ ಹಂತದಲ್ಲಿದ್ದು ಇದು ಭಾರತೀಯ ಷೇರು ಮಾರುಕಟ್ಟೆ ಮೇಲೆ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಭಾರತ ಕಡಿಮೆ ಸಮಸ್ಯೆ ಎದುರಿಸುತ್ತದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.
ಚೀನಾ ರಫ್ತು ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಕಡಿಮೆ ಇವೆ, ಈ ಹಿನ್ನೆಲೆಯಲ್ಲಿ ಚೀನಾ ಕರೆನ್ಸಿ ಅಪಮೌಲ್ಯಗೊಂಡಿರುವುದರಿಂದ ಉಂಟಾಗಿರುವ ಜಾಗತಿಕ ಆರ್ಥಿಕ ಪ್ರಕ್ಷುಬ್ಧತೆಯಿಂದಾಗಿ ಭಾರತ ಹೆಚ್ಚು ಸಮಸ್ಯೆ ಎದುರಿಸುವುದಿಲ್ಲ ಎಂದು ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯಂ ಹೇಳಿದ್ದಾರೆ.
Advertisement