ಸಿಂಗಾಪುರದಲ್ಲಿ ಉದ್ಯಮಿಗಳ ಸಭೆ: ಹೂಡಿಕೆದಾರರಿಗೆ ಜೇಟ್ಲಿ ಅಭಯ

ಭಾರತ ಸರ್ಕಾರ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದ್ದು ದೇಶದ ಆರ್ಥಿಕತೆಯನ್ನು ಮುಂದಕ್ಕೊಯ್ಯಲು ವಿದೇಶಿ ಸೇರಿದಂತೆ ಖಾಸಗಿ ಹೂಡಿಕೆಯನ್ನು ಉತ್ತೇಜಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇಲ್ಲಿನ ಹೂಡಿಕೆದಾರರಿಗೆ ಭರವಸೆ ನೀಡಿದ್ದಾರೆ...
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)
Updated on: 

ಸಿಂಗಾಪುರ: ಭಾರತ ಸರ್ಕಾರ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದ್ದು ದೇಶದ ಆರ್ಥಿಕತೆಯನ್ನು ಮುಂದಕ್ಕೊಯ್ಯಲು ವಿದೇಶಿ ಸೇರಿದಂತೆ ಖಾಸಗಿ ಹೂಡಿಕೆಯನ್ನು  ಉತ್ತೇಜಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇಲ್ಲಿನ ಹೂಡಿಕೆದಾರರಿಗೆ ಭರವಸೆ ನೀಡಿದ್ದಾರೆ.

ಭಾರತಕ್ಕೆ ಬಂಡವಾಳ ಆಕರ್ಷಿಸಲು ಸಿಂಗಾಪುರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ವಿದೇಶಿ ಹೂಡಿಕೆದಾರರೊಂದಿಗೆ ಶುಕ್ರವಾರ ಬೆಳಗ್ಗೆ ಮಾತುಕತೆ ನಡೆಸಿದರು. ಭಾರತದ ಆರ್ಥಿಕ  ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುವಂತೆ ಇಲ್ಲಿನ ಉದ್ಯಮಿಗಳನ್ನು ಆಹ್ವಾನಿಸಿದ ಅವರು, ಸುಧಾರಣೆಗಳನ್ನು ಮುಂದುವರೆಸುವುದರೊಂದಿಗೆ ಹೂಡಿಕೆ ಸ್ನೇಹಿ ವಾತಾವರಣ ನಿರ್ಮಿಸಲು ನಮ್ಮ  ಸರ್ಕಾರ ಬದ್ಧವಾಗಿದೆ. ವಿದೇಶಿ ಹೂಡಿಕೆ ಪ್ರಸ್ತಾವನೆಗಳು ತಡೆಹಿಡಿದಿರುವ ಒಂದೂ ಪ್ರಕರಣ ಇಲ್ಲದಂತೆ ಮಾಡಲಾಗುವುದು ಎಂದಿದ್ದಾರೆ.

ಭಾರತದಲ್ಲಿ ಕೈಗೊಳ್ಳುತ್ತಿರುವ ಸುಧಾರಣೆಗಳು ವಿಶ್ವಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ. ಜಾಗತಿಕ ಆರ್ಥಿಕತೆಯಲ್ಲಿ ಭಾರತದ ಪಾತ್ರ ಅತ್ಯಂತ ಪ್ರಮುಖ ಎಂದಿದ್ದಾರೆ ಎಂದರು. ಸಿಂಗಾಪುರ  ಮೂಲದ ಸುಮಾರು 300 ಅಧಿಕಾರಿಗಳು, ಹೂಡಿಕೆದಾರರು, ಯೂರೋಪ್, ಅಮೆರಿಕದ ವಾಣಿಜ್ಯ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com