ಬ್ಯಾಂಕ್‍ಗಳಲ್ಲಿ ಅನುತ್ಪಾದಕ ಸಾಲ ಇಳಿಕೆಗೆ ಅಗತ್ಯ ಕ್ರಮ: ಅರುಣ್ ಜೇಟ್ಲಿ

ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ಸರ್ಕಾರದ ಪಾಲನ್ನು ಶೇ.52ಕ್ಕೆ ಇಳಿಸಲು ಮುಕ್ತವಾಗಿರುವುದಾಗಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ...
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
Updated on: 

ಮುಂಬೈ: ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ಸರ್ಕಾರದ ಪಾಲನ್ನು ಶೇ.52ಕ್ಕೆ ಇಳಿಸಲು ಮುಕ್ತವಾಗಿರುವುದಾಗಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ರಾಜ್ಯಗಳ ವಿದ್ಯುತ್ ವಿತರಣಾ ಕಂಪನಿಗಳು ದಿರುವ ಬಾಕಿ ಸೇರಿದಂತೆ ಬ್ಯಾಂಕ್‍ಗಳಲ್ಲಿನ ಅನುತ್ಪಾದಕ ಸಾಲ ಪ್ರಮಾಣ ಇಳಿಸಲು ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.

ಭಾರತೀಯ ಬ್ಯಾಂಕ್ ಒಕ್ಕೂಟದ 68ನೇ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಬ್ಯಾಂಕ್ ಗಳಿಗೆ ಸ್ವಾತಂತ್ರ್ಯ ಮತ್ತು ರಾಜಕಾರಣದಿಂದ ದೂರವಿಡುವ ಅಗತ್ಯವಿದೆ ಎಂದರು. ರಾಜ್ಯಗಳ ಅಭಿವೃದ್ಧಿ ಕಾರ್ಯ ಯೋಜನೆಗೆ ಸಹಕರಿಸುವಂತೆ ಬ್ಯಾಂಕ್ ಗಳು ಕಾರ್ಯನಿರ್ವಹಿಸಬೇಕು. ಇದೇ ಸಂದರ್ಭದಲ್ಲಿ ಬ್ಯಾಂಕ್ ಗಳ ಆಡಳಿತ ಸಂಪೂರ್ಣವಾಗಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅನುಸರಿಸಬೇಕೆಂದು ಸಲಹೆ ನೀಡಿದರು.

ಯಾವುದೇ ಬ್ಯಾಂಕ್‍ಗೆ ಸರ್ಕಾರದಿಂದ ಸೂಚನೆಗಳನ್ನು ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಸಹ ಹೇಳಿದ್ದಾರೆ. ಅಗತ್ಯಕ್ಕೆ ತಕ್ಕಂತೆ ಕಾರ್ಯನಿರ್ವಹಿಸಬೇಕೆಂತಲೂ ತಿಳಿಸಿದ್ದಾರೆ ಎಂದರು. ಬ್ಯಾಂಕ್ ಹುದ್ದೆಗಳ ನೇಮಕಾತಿಯಲ್ಲೂ ಸರ್ಕಾರ ವೃತ್ತಿಪರತೆ ಅನುಸರಿಸಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com