ನೂತನ ವಿತ್ತ ನೀತಿ: ಆರ್'ಬಿಐ ನಿರ್ಧಾರವನ್ನು ಪ್ರಶಂಸಿಸಿದ ಅರವಿಂದ ಸುಬ್ರಮಣಿಯನ್

ರೆಪೋ ದರದರಲ್ಲಿ ಯಾವುದೇ ಬದಲಾವಣೆ ಮಾಡದೆ ನೂತನ ಹಣಕಾಸು ನೀತಿಯನ್ನು ಪ್ರಕರಟಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ನ ನಿರ್ಧಾರವನ್ನು ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರು ಬುಧವಾರ ಪ್ರಶಂಸಿಸಿದ್ದಾರೆ...
ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್
ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್
Updated on

ನವದೆಹಲಿ: ರೆಪೋ ದರದರಲ್ಲಿ ಯಾವುದೇ ಬದಲಾವಣೆ ಮಾಡದೆ ನೂತನ ಹಣಕಾಸು ನೀತಿಯನ್ನು ಪ್ರಕರಟಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ನ ನಿರ್ಧಾರವನ್ನು ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರು ಬುಧವಾರ ಪ್ರಶಂಸಿಸಿದ್ದಾರೆ.

ನೂತನ ಹಣಕಾಸು ನೀತಿಯನ್ನು ಪ್ರಕಟಿಸಿದ್ದ ಆರ್ ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಹೇಳಿತ್ತು. ಪ್ರಸ್ತುತ ರೆಪೋ ದರ ಶೇ.6.25ರಷ್ಟಿದ್ದು ಇದರಲ್ಲಿ ಬದಲಾವಣೆ ಮಾಡಿಲ್ಲ ಎಂದು ನೂತನ ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿದ್ದರು.

ಆರ್ ಬಿಐ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅರವಿಂದ ಸುಬ್ರಮಣಿಯನ್ ಅವರು, ಸರಿಯಾದ ಸಮಯಕ್ಕೆ ಆರ್ ಬಿಐ ಸರಿಯಾದ ಹಾಗೂ ಉತ್ತಮ ನಿರ್ಧಾರವನ್ನು ತೆಗೆದುಕೊಂಡಿದೆ.

ಹಿಂದಿನ ದಿನಗಳಿಗಿಂತಲೂ ಪ್ರಸ್ತುತ ಪರಿಸ್ಥಿತಿ ಬದಲಾಗಿದ್ದು, ವಿದೇಶಿ ವಿನಿಮಯ ಮಾರುಕಟ್ಟೆಯ ಪರಿಸ್ಥಿತಿ ಸ್ಥಿರವಾಗಿದೆ ಎಂಬುದನ್ನು ತೋರಿಸಬೇಕಾಗಿದೆ. ಪ್ರಸ್ತುತ ಸಮಸ್ಯೆಗಳು ಎದುರಾಗಬಹುದು ಆದರೆ, ಮುಂದಿನ ದಿನಗಳಲ್ಲಿ ಮಾರುಕಟ್ಟೆ ಪರಿಸ್ಥಿತಿ ಸುಧಾರಿಸಲಿದೆ. ದೇಶದ ಬೆಳವಣಿಗೆ ಹಾಗೂ ಅಭಿವೃದ್ಧಿಯ ಪರಿಣಾಮಗಳು ಮುಂದಿನ ದಿನಗಳಲ್ಲಿ ಕಂಡುಬರಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com