2015-16ರಲ್ಲಿ ತೆರಿಗೆ ಕಟ್ಟದ 70 ಲಕ್ಷ ತೆರಿಗೆದಾರರ ವಿರುದ್ಧ ಕ್ರಮಕ್ಕೆ ಮುಂದಾದ ಐಟಿ ಇಲಾಖೆ!

ನವದೆಹಲಿ: 2015 ಮತ್ತು 2016ನೇ ಸಾಲಿನಲ್ಲಿ ದೇಶಾದ್ಯಂತ ಸುಮಾರು 70 ಲಕ್ಷ ತೆರಿಗೆದಾರರು ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಕೇಂದ್ರ ಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ.
ತೆರಿಗೆ ಇಲಾಖೆಯ ನಾನ್ ಫಿಲ್ಲರ್ ಮಾನಿಟರಿಂಗ್ ಸಿಸ್ಟಮ್ ನ ಪರಿಶೀಲನೆ ವೇಳೆ ಈ ಮಹತ್ವದ ಅಂಶ ಬಯಲಾಗಿದ್ದು, ದತ್ತಾಂಶ ಹೊಂದಾಣಿಕೆಯ ವೇಳೆ ಸುಮಾರು 67.54 ಲಕ್ಷಕ್ಕೂ ಅಧಿಕ ಮಂದಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. 2014-15 ವಿತ್ತೀಯ ವರ್ಷದಲ್ಲಿನ ವ್ಯವಹಾರ ಆಧಾರದ ಮೇಲೆ ಸುಮಾರು 70 ಲಕ್ಷ ಮಂದಿ ತೆರಿಗೆ ಪಾವತಿ ಮಾಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ), ವಾರ್ಷಿಕ ತೆರಿಗೆ ಪಾವತಿ ಇಲಾಖೆ, ಕೇಂದ್ರೀಯ ಮಾಹಿತಿ ಕೇಂದ್ರ ಹಾಗೂ ಟಿಡಿಎಸ್/ಟಿಸಿಎಸ್ ನಿಂದ ಪಡೆದ ದತ್ತಾಂಶಗಳ ಆಧಾರದ ಮೇಲೆ ತೆರಿಗೆ ಬಾಕಿ ಉಳಿಸಿಕೊಂಡಿರುವ ತೆರಿಗೆದಾರರನ್ನು ಗುರಿತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವ ತೆರಿಗೆದಾರರ ಕುರಿತು ಈಗಾಗಲೇ ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದು, ಮುಂದಿನ ಕ್ರಮದ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಂತೆಯೇ ಪ್ಯಾನ್ ಕಾರ್ಡ್ ಮೂಲಕ ತೆರಿಗೆಪಾವತಿದಾರರು ತೆರಿಗೆ ಇಲಾಖೆಯ ವೆಬ್ ಸೈಟಿನಲ್ಲಿ ಮಾಹಿತಿ ಪಡೆಯಬಹುದು ಎಂದು ಸಿಬಿಡಿಟಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


