14,200 ಕೋಟಿ ತೆರಿಗೆ ಬಾಕಿ ಪಾವತಿಸುವಂತೆ ವೋಡಾಫೋನ್‌ಗೆ ನೆನಪಿಸಿದ ತೆರಿಗೆ ಇಲಾಖೆ

14,200 ಕೋಟಿ ತೆರಿಗೆ ಬಾಕಿ ಕಟ್ಟುವಂತೆ ವೋಡಾಫೋನ್ ಕಂಪನಿಗೆ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದ್ದು, ಒಂದು ವೇಳೆ ತೆರಿಗೆ ಪಾವತಿ ಮಾಡದಿದ್ದರೆ...
ವೋಡಾಫೋನ್
ವೋಡಾಫೋನ್

ನವದೆಹಲಿ: 14,200 ಕೋಟಿ ತೆರಿಗೆ ಬಾಕಿ ಪಾವತಿಸುವಂತೆ ವೋಡಾಫೋನ್ ಕಂಪನಿಗೆ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದ್ದು, ಒಂದು ವೇಳೆ ತೆರಿಗೆ ಪಾವತಿ ಮಾಡದಿದ್ದರೆ ಸ್ವತ್ತುಗಳನ್ನು ವಶಪಡಿಸಿಕೊಳ್ಳುವ ಎಚ್ಚರಿಕೆ ನೀಡಿದೆ.

2007ರಲ್ಲಿ ಹಚ್ ಎಸ್ಸಾರ್ ಸಂಸ್ಥೆ ಸ್ವಾಧೀನಪಡಿಸಿಕೊಂಡ ವಹಿವಾಟಿಗೆ ಸಂಬಂಧಿಸಿದಂತೆ 14,200 ಕೋಟಿ ರುಪಾಯಿ ತೆರಿಗೆ ಪಾವತಿಸುವಂತೆ ವೋಡಾಫೋನ್ ಇಂಟರ್ ನ್ಯಾಷನ್ಲ ಹೋಲ್ಡಿಂಗ್ಸ್ ಗೆ ಆದಾಯ ತೆರಿಗೆ ಇಲಾಖೆ ಫೆಬ್ರವರಿ 4 ರಂದು ನೋಟಿಸ್ ನೀಡಿದೆ. ತೆರಿಗೆ ಪಾವತಿಸಲು ಸಾಧ್ಯವಾಗದಿದ್ದರೆ ಸ್ವತ್ತುಗಳನ್ನು ವಶಪಡಿಸಿಕೊಳ್ಳು ಎಚ್ಚರಿಕೆಯನ್ನು ನೀಡಿದೆ.

ಆದಾಯ ತೆರಿಗೆ ಇಲಾಖೆ ನೀಡಿರುವ ನೋಟೀಸ್ ಹಾಗೂ ಪಾವತಿಗೆ ಸಂಬಂಧಿಸಿದಂತೆ ತೆರಿಗೆ ಪಾವತಿ ಮಾಡಲು ಸಾಧ್ಯವಾಗದಿದ್ದರೆ ಸಂಸ್ಥೆಯ ಸ್ವತ್ತುಗಳನ್ನು ವಶಪಡಿಸಿಕೊಳ್ಳುವ ಕುರಿತಾದ ನೋಟೀಸ್ ಸ್ವೀಕರಿಸಿದ್ದು, ತೆರಿಗೆ ಬೇಡಿಕೆ ಪ್ರಸ್ತುತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಗೆಹರಿಸಿಕೊಳ್ಳುವ ವಿಷಯವಾಗಿದೆ ಎಂದು ವೋಡಾಫೋನ್ ವಕ್ತಾರ ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ವಿದೇಶ ಬಂಡವಾಳ ಹೂಡಿಕೆದಾರರಿಗೆ ತೆರಿಗೆ ಸ್ನೇಹಿ ಪರಿಸರ ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಈ ಮಧ್ಯೆ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದ್ದು, ಆದಾಯ ತೆರಿಗೆ ಇಲಾಖೆಯ ವ್ಯತಿರಿಕ್ತ ನಡೆ ಇದಾಗಿದೆ ಎಂದು ವೋಡಾಫೋನ್ ವಕ್ತಾರರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com