ಸಣ್ಣ ಉಳಿತಾಯ ಬಡ್ಡಿದರ ಶೇ.0.25ರಷ್ಟು ಕಡಿತ

ಕೇಂದ್ರ ಸರ್ಕಾರ ಅಂಚೆ ಕಚೇರಿಯ ಅಲ್ಪಾವಧಿ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಶೇ.0.25ರಷ್ಟು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಕೇಂದ್ರ ಸರ್ಕಾರ ಅಂಚೆ ಕಚೇರಿಯ ಅಲ್ಪಾವಧಿ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಶೇ.0.25ರಷ್ಟು ಕಡಿತಗೊಳಿಸಿದೆ.
ಮಾರುಕಟ್ಟೆ ದರಗಳಿಗೆ ಅನುಗುಣವಾಗಿ ಬಡ್ಡಿದರಗಳನ್ನು ಸರಿದೂಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಆದರೆ, ಎಂಐಎಶ್, ಪಿಪಿಎಫ್, ಹಿರಿಯ ನಾಗರಿಕರು ಮತ್ತು ಮಕ್ಕಳ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು ಯಥಾಸ್ಥಿತಿ ಮುಂದುವರೆಯಲಿದೆ.
ಬರುವ ಏಪ್ರಿಲ್ 1ರಿಂದ ಹೊಸ ಬಡ್ಡಿದರ ಅನ್ವಯವಾಗಲಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. 
ಕಿಸಾನ್ ವಿಕಾಸ ಪತ್ರ, ಅಂಚೆ ಕಚೇರಿಯ 1,2 ಮತ್ತು 3 ವರ್ಷ ಅವಧಿ ಠೇವಣಿಗಳು ಸೇರಿದಂತೆ ಐದು ವರ್ಷಗಳ ಅವಧಿಯ ರೆಕರಿಂಗ್ ಡಿಪಾಸಿಟ್ ಗಳ ಮೇಲಿನ ಬಡ್ಡಿದರಗಳು ಕಡಿಮೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com