ಕೆಎಸ್ಆರ್ ಟಿಸಿಯಿಂದ ಉಚಿತ ವೈಫೈ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಭಾರತದಲ್ಲಿಯೇ ಮೊದಲ ಬಾರಿಗೆ ತನ್ನ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ವೈ-ಫೈ ಇಂಟರ್ ನೆಟ್ ಸೇವೆಯನ್ನು ನೀಡಲು ಮುಂದಾಗಿದೆ...
(ಸಂಗ್ರಹ ಚಿತ್ರ)
(ಸಂಗ್ರಹ ಚಿತ್ರ)

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಭಾರತದಲ್ಲಿಯೇ ಮೊದಲ ಬಾರಿಗೆ ತನ್ನ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ವೈ-ಫೈ ಇಂಟರ್ ನೆಟ್ ಸೇವೆಯನ್ನು ನೀಡಲು ಮುಂದಾಗಿದೆ.

ನಿಗಮ ಡಿವಿಓಈಎಸ್ ಕಮ್ಯೂನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್ ಅವರ ಸಹಯೋಗದೊಂದಿಗೆ ಆಯ್ದ ಬಸ್ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಇಂಟರ್ ನೆಟ್ ಸೇವೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ಮತ್ತು ಶಾಂತಿನಗರ, ಹಾಸನ, ಮಂಡ್ಯ, ಮೈಸೂರು, ಮಡಿಕೇರಿ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶಿವಮೊಗ್ಗ, ಹರಿಹರ, ದಾವಣಗೆರೆ, ಚಿಕ್ಕಮಗಳೂರು ಮತ್ತು ತುಮಕೂರು ನಗರಗಳ ಬಸ್ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಇಂಟರ್ ನೆಟ್ ಸೇವೆಯನ್ನು ಅಳವಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com