ಈ ವಾರ ರಾಜ್ಯಸಭೆಯಲ್ಲಿ ಜಿಎಸ್ ಟಿ ಬಗ್ಗೆ ಚರ್ಚೆ:ಎಲ್ಲಾ ರಾಜ್ಯಗಳ ಹಣಕಾಸು ಸಚಿವರೊಂದಿಗೆ ಅರುಣ್ ಜೇಟ್ಲಿ ಸಭೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಸೂದೆಯಾಗಿರುವ ಜಿಎಸ್ ಟಿ ಮಸೂದೆ ಬಗ್ಗೆ ಈ ವಾರದಲ್ಲಿ ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ.
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
Updated on: 

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಸೂದೆಯಾಗಿರುವ ಜಿಎಸ್ ಟಿ ಮಸೂದೆ ಬಗ್ಗೆ ಈ ವಾರದಲ್ಲಿ ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದ್ದು, ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಎಲ್ಲಾ ರಾಜ್ಯಗಳ ಹಣಕಾಸು ಸಚಿವರನ್ನು ಭೇಟಿ ಮಾಡಲಿದ್ದಾರೆ.

ಜಿಎಸ್ ಟಿ ಮಸೂದೆ ಅಂಗೀಕಾರ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಚಿವ ಅರುಣ್ ಜೇಟ್ಲಿ ಯತ್ನಿಸುತ್ತಿದ್ದು, ಮಸೂದೆ ಅಂಗೀಕಾರಕ್ಕೆ ಬೆಂಬಲಿಸಲು ಕಾಂಗ್ರೆಸ್ ವಿಧಿಸಿರುವ ಕೆಲವು ಷರತ್ತು ಹಾಗೂ ಕಾಂಗ್ರೆಸ್ ಸೂಚಿಸಿರುವ ಮಸೂದೆಯಲ್ಲಿನ ಕೆಲವು ಬದಲಾವಣೆ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಜ್ಯಗಳ ಮೇಲೆ ಶೇ.1 ರಷ್ಟು ಹೆಚ್ಚುವರಿ ತೆರಿಗೆಗಳನ್ನು ವಿಧಿಸುವುದನ್ನು ಕಾಂಗ್ರೆಸ್ ವಿರೋಧಿಸುತ್ತಿದ್ದು ಮಸೂದೆಯಲ್ಲಿನ ಈ ಅಂಶವನ್ನು ತೆಗೆದುಹಾಕುವಂತೆ ಒತ್ತಾಯಿಸುತ್ತಿದೆ.  ರಾಜ್ಯಗಳೊಂದಿಗೆ ಜಿಎಸ್ ಟಿ ಮಸೂದೆ ಬಗ್ಗೆ ಚರ್ಚೆ ನಡೆಸಿದ ಬಳಿಕ ರಾಜ್ಯಸಭೆಯಲ್ಲಿ ಮಸೂದೆ ಬಗ್ಗೆ ಚರ್ಚೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆ.

ಸೋಮವಾರ ಜು.25 ರಿಂದ ಪ್ರಾರಂಭವಾಗಲಿರುವ ಅಧಿವೇಶನದಲ್ಲಿ ಒಂದು ವಾರಗಳ ಕಾಲ ನಡೆಯಬೇಕಿರುವ ಚರ್ಚೆ ನಡೆಯಬೇಕಿರುವ ವಿಷಯಗಳ ಬಗ್ಗೆ ಮಾಹಿತಿ ನೀಡಿರುವ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಜಿಎಸ್ ಟಿ ಮಸೂದೆ ಮುಂದಿನ ವಾರ ಚರ್ಚೆಗೆ ಬರಲಿರುವ ವಿಷಯಗಳ ಪಟ್ಟಿಯಲ್ಲಿದೆ ಎಂದು ತಿಳಿಸಿದ್ದರು. ರಾಜ್ಯಗಳ ಮೇಲೆ ಶೇ.1 ರಷ್ಟು ಹೆಚ್ಚುವರಿ ತೆರಿಗೆಗಳನ್ನು ವಿಧಿಸುವ ಪ್ರಸ್ತಾವನೆಯನ್ನು ಮಸೂದೆಯಿಂದ ತೆಗೆದು ಹಾಕಲು ಅರುಣ್ ಜೇಟ್ಲಿ ಒಪ್ಪಿಗೆ ಸೂಚಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com