ಬಸ್ ಬಂದ್ ನಂತರ ನಾಳೆ ಬ್ಯಾಂಕ್ ನೌಕರರ ಮುಷ್ಕರ

ನಾಳೆ ದೇಶಾದ್ಯಂತ ಬ್ಯಾಂಕ್‌ ನೌಕರರು ಮುಷ್ಕರಕ್ಕೆ ಕರೆ ನೀಡಿರುವುದರ ಹಿನ್ನೆಲೆಯಲ್ಲಿ ದೈನಂದಿನ ಬ್ಯಾಂಕ್ ಸೇವೆಗಳು ಸ್ಥಗಿತಗೊಳ್ಳಲಿವೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ನಾಳೆ ದೇಶಾದ್ಯಂತ ಬ್ಯಾಂಕ್‌ ನೌಕರರು ಮುಷ್ಕರಕ್ಕೆ ಕರೆ ನೀಡಿರುವುದರ ಹಿನ್ನೆಲೆಯಲ್ಲಿ ದೈನಂದಿನ ಬ್ಯಾಂಕ್ ಸೇವೆಗಳು ಸ್ಥಗಿತಗೊಳ್ಳಲಿವೆ.

ಕೇಂದ್ರ ಸರ್ಕಾರದ ಜನವಿರೋಧಿ ಬ್ಯಾಂಕಿಂಗ್‌ ನೀತಿಯನ್ನು ಖಂಡಿಸಿ ಯುನೈಟೆಡ್‌ ಫೋರಂ ಆಫ್ ಬ್ಯಾಂಕ್‌ ಯೂನಿಯನ್‌ (ಯುಎಫ್ಬಿಯು) ಜು. 29ರಂದು ಕರೆ ನೀಡಿರುವ ಒಂದು ದಿನದ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದ ಬ್ಯಾಂಕ್‌ ನೌಕರರ ಸಂಘಟನೆಗಳು ಬೆಂಬಲ ಸೂಚಿಸಿವೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಸೇರಿದಂತೆ ಗ್ರಾಮೀಣ ಮತ್ತು ಸಹಕಾರಿ ಬ್ಯಾಂಕುಗಳ ಖಾಸಗೀಕರಣ ಹಾಗೂ ವಿಲೀನಗೊಳಿಸುವ ಪ್ರಕ್ರಿಯೆ ಮತ್ತು ಬ್ಯಾಂಕಿಂಗ್‌ ವಲಯದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ನೀಡುವ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಯುಎಫ್ ಬಿಯು ದೇಶವ್ಯಾಪಿ ಒಂದು ದಿನದ ಬ್ಯಾಂಕ್‌ ಮುಷ್ಕರಕ್ಕೆ ಕರೆ ನೀಡಿದೆ. ಅದರಂತೆ ಜು.29ರಂದು ರಾಜ್ಯದಲ್ಲೂ ಒಂದು ದಿನದ ಮಟ್ಟಿಗೆ ಬ್ಯಾಂಕ್‌ ವಹಿವಾಟು ಇರುವುದಿಲ್ಲ .

ನಾಳೆ ದೇಶವ್ಯಾಪಿ ನಡೆಯುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಳ್ಳುತ್ತಿದ್ದು, ಸಾರ್ವಜನಿಕ ವಲಯದ 28 ಬ್ಯಾಂಕುಗಳು ಸೇರಿದಂತೆ ಕೆಲವು ಖಾಸಗಿ ಮತ್ತು ವಿದೇಶಿ ಬ್ಯಾಂಕುಗಳೂ ಮುಷ್ಕರವನ್ನು ಬೆಂಬಲಿಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com