ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಆಮ್ ಆದ್ಮಿಗೆ ರಿಲೀಫ್: ಶನಿವಾರ, ಭಾನುವಾರವೂ ಬ್ಯಾಂಕ್ ಗಳು ತೆರೆದಿರುತ್ತವೆ; ಆರ್ ಬಿಐ

ದಿಢೀರ್ 500, 1000 ರುಪಾಯಿ ನೋಟ್ ಗಳ ನಿಷೇಧದಿಂದ ಪರದಾಡುತ್ತಿರುವ ಜನಸಾಮಾನ್ಯರಿಗೆ ಬಿಗ್ ರಿಲೀಫ್ ನೀಡಿರುವ ಆರ್ ಬಿಐ, ಶನಿವಾರ ಹಾಗೂ....
ನವದೆಹಲಿ: ದಿಢೀರ್ 500, 1000 ರುಪಾಯಿ ನೋಟ್ ಗಳ ನಿಷೇಧದಿಂದ ಪರದಾಡುತ್ತಿರುವ ಜನಸಾಮಾನ್ಯರಿಗೆ ಬಿಗ್ ರಿಲೀಫ್ ನೀಡಿರುವ ಆರ್ ಬಿಐ, ಶನಿವಾರ ಹಾಗೂ ಭಾನುವಾರವೂ ದೇಶಾದ್ಯಂತ ಎಲ್ಲಾ ಬ್ಯಾಂಕ್ ಗಳು ಕಾರ್ಯನಿರ್ವಹಿಸಲಿವೆ ಎಂದು ಬುಧವಾರ ಹೇಳಿದೆ.
ವರದಿಯ ಪ್ರಕಾರ, ನವೆಂಬರ್ 10 ರಿಂದ ಬ್ಯಾಂಕ್ ಗಳು ಕಾರ್ಯನಿರ್ವಹಿಸಲಿದ್ದು, ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ಗ್ರಾಹಕರು ವಹಿವಾಟು ನಡೆಸಬಹುದಾಗಿದೆ.
ನವೆಂಬರ್ 10 ಮತ್ತು 11ರಂದು ಬೆಳಗ್ಗೆ 10ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬ್ಯಾಂಕ್ ಗಳು ಕಾರ್ಯನಿರ್ವಹಿಸಲಿವೆ. ಅಲ್ಲದೆ ಗ್ರಾಹಕರ ಅನುಕೂಲಕ್ಕಾಗಿ ಶನಿವಾರ ಮತ್ತು ಭಾನುವಾರವೂ ಕಾರ್ಯನಿರ್ವಹಿಸಲಿವೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಂಡಿ ಮತ್ತು ಸಿಇಒ ಉಷಾ ಅನಂತಸುಬ್ರಮಣ್ಯನ್ ಅವರು ಹೇಳಿದ್ದಾರೆ.
ಮಂಗಳವಾರ ದಿಢೀರ್ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಪ್ಪು ಹಣ, ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ನಕಲಿ ನೋಟುಗಳ ಹಾವಳಿ ತಡೆಯುವುದಕ್ಕಾಗಿ ಇಂದು ಮಧ್ಯರಾತ್ರಿಯಿಂದಲೇ 500 ಹಾಗೂ 1000 ರುಪಾಯಿ ನೋಟ್ ಗಳಿಗೆ ನಿಷೇಧ ಹೇರಲಾಗಿದೆ ಎಂದು ಘೋಷಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com