ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಊರ್ಜಿತ್ ಪಟೇಲ್, 500, 1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ನಂತರ ಆರ್ ಬಿಐ ಪರಿಸ್ಥಿತಿಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದೆ. ನೋಟು ಮುದ್ರಣಾಲಯಗಳು 100 ಮತ್ತು 500 ಮುಖಬೆಲೆಯ ನೋಟುಗಳನ್ನು ತಯಾರಿಸಿ ನೋಟುಗಳ ಕೊರತೆಯನ್ನು ಸರಿದೂಗಿಸಲು ಪ್ರಯತ್ನಿಸುತ್ತಿದೆ.