ಎರಡನೇ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.7.3 ಕ್ಕೆ ಏರಿಕೆ

ಪ್ರಸಕ್ತ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕ ವರದಿ ಪ್ರಕಟವಾಗಿದ್ದು, ಜುಲೈ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇ.7.3 ಕ್ಕೆ ಏರಿಕೆಯಾಗಿದೆ.
ಎರಡನೇ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.7.3 ಕ್ಕೆ ಏರಿಕೆ
ಎರಡನೇ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.7.3 ಕ್ಕೆ ಏರಿಕೆ
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕ ವರದಿ ಪ್ರಕಟವಾಗಿದ್ದು, ಜುಲೈ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇ.7.3 ಕ್ಕೆ ಏರಿಕೆಯಾಗಿದೆ. ಕಳೆದ ತ್ರೈಮಾಸಿಕದಲ್ಲಿ ಶೇ.7.1 ರಷ್ಟಿದ್ದ ಜಿಡಿಪಿ ಬೆಳವಣಿಗೆ ದರ ಶೇ.7.1 ರಷ್ಟಿತ್ತು. 
ಎರಡನೇ ತ್ರೈಮಾಸಿಕದಲ್ಲಿ ಉತ್ಪಾದನಾ ಕ್ಷೇತ್ರ, ಸೇವಾ ಕ್ಷೇತ್ರ, ವ್ಯಾಪಾರ ವಹಿವಾಟುಗಳ ಕ್ಷೇತ್ರದ ಕಾರ್ಯಕ್ಷಮತೆಯಲ್ಲಿ ಸುಧಾರಣೆ ಕಂಡುಬಂದಿರುವ ಪರಿಣಾಮವಾಗಿ ಜಿಡಿಪಿ ದರ ಶೇ.7.3ಕ್ಕೆ ಏರಿಕೆಯಾಗಿದೆ. ಕಳೆದ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರ ಶೇ.7.6 ರಷ್ಟಿತ್ತು. 
ಕೇಂದ್ರ ಅಂಕಿ-ಅಂಶಗಳ ಕಚೇರಿ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಪೌರಾಡಳಿತ, ರಕ್ಷಣಾ ಸೇವೆ, ಹಣಕಾಸು, ವಿಮೆ, ರಿಯಲ್ ಎಸ್ಟೇಟ್, ಉತ್ಪಾದನೆ, ವ್ಯಾಪಾರ ವಹಿವಾಟು, ಸಾರಿಗೆ, ಸಂವಹನ ಕ್ಷೇತ್ರಗಳ ಬೆಳವಣಿಗೆ ದರ ಶೇ.7 ರಷ್ಟಿದೆ ಎಂದು ತಿಳಿದುಬಂದಿದೆ. 
ಪ್ರಸಕ್ತ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರದ ಮೇಲೆ ನೋಟು ನಿಷೇಧದ ಪರಿಣಾಮ ಇಲ್ಲ 
ಪ್ರಧಾನಿ ನರೇಂದ್ರ ಮೋದಿ ನ.8 ರಂದು ಘೋಷಿಸಿದ್ದ 500, 100 ರೂ ನೋಟುಗಳ ನಿಷೇಧದ ನಿರ್ಧಾರದ ಪರಿಣಾಮ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಏರಿಕೆಯ ಮೇಲೆ ಇರುವುದಿಲ್ಲ. ನೋಟು ನಿಷೇಧದ ನಿರ್ಧಾರ ಜಿಡಿಪಿ ಮೇಲೆ ಮುಂದಿನ ತ್ರೈಮಾಸಿಕದಲ್ಲಿ ಜಿಡಿಪಿ ಮೇಲೆ ನೋಟು ನಿಷೇಧದ ಪರಿಣಾಮ ತಿಳಿಯಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com